ತಿಪಟೂರು:ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ’ ಮಾಜಿ ನಗರಸಭೆ ಅಧ್ಯಕ್ಷೆ ಮೇಘನಾ ಭೂಷಣ್ ಕಿಡಿ.

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Tiptur: Former Municipal Council President Meghana Bhushan blames the central government for the NEET exam failure

ತಿಪಟೂರು :ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ’ ಮಾಜಿ ನಗರಸಭೆ ಅಧ್ಯಕ್ಷೆ ಮೇಘನಾ ಭೂಷಣ್ ಕಿಡಿ.

ಜಾಹೀರಾತು

ತಿಪಟೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ, ಪರೀಕ್ಷಾ ಪಾವಿತ್ರತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಮಾಜಿ ನಗರಸಭೆ ಅಧ್ಯಕ್ಷೆ ಮೇಘನಾ ಭೂಷಣ್ ಆರೋಪಿಸಿದರು.

ಈ ವೈಫಲ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ, ಈ ಬಗ್ಗೆ ಸಂಸದರು ಸಂಸತ್ತಿನಲ್ಲಿ ಧ್ವನಿ ಎತ್ತಬೇಕು ಎಂದು ಇದೆ ವೇಳೆ ಅವರು ಒತ್ತಾಯಿಸಿದರು.
ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸು, ಭವಿಷ್ಯವನ್ನು ಕೇಂದ್ರ ಸರ್ಕಾರ ಹಾಳು ಮಾಡಿದೆ ಎಂದು ಆರೋಪಿಸಿದರು.ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೀಟ್ ಪರೀಕ್ಷೆ ಮಾತ್ರವಲ್ಲ, ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಲೀಕ್ ಮಾಡುವ ದೊಡ್ಡ ದಂಧೆಯೇ ನಡೆಯುತ್ತಿದೆ. ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲೂ ಅಕ್ರಮಗಳು ನಡೆದ ಆರೋಪಗಳಿವೆ. ಮೋದಿ ಸರ್ಕಾರ ಬಡವರ ಪರವಾಗಿಲ್ಲ, ಬಂಡವಾಳಶಾಹಿಗಳ ಪರವಿದೆ ಎಂದು ಟೀಕಿಸಿದರು.

ದೇಶದಲ್ಲಿ ಸುಮಾರು 24 ಲಕ್ಷ, ರಾಜ್ಯದಲ್ಲಿ 1.4 ಲಕ್ಷ ವಿದ್ಯಾರ್ಥಿಗಳು ನೀಟ್ ಮೂಲಕ ತಮ್ಮ ವೈದ್ಯಕೀಯ ಪದವಿಯ ಕನಸು ಕಂಡಿದ್ದರು. ಅಷ್ಟೂ ಜನರಿಗೆ ಮೋದಿ ಸರ್ಕಾರ ಅನ್ಯಾಯ ಮಾಡಿದೆ. ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ. ಪ್ರಾಮಾಣಿಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ನೀಟ್ ಮತ್ತಿತರ ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಪ್ರಧಾನಿ ಮೋದಿ ಹಾಗೂ ಸಂಬಂಧಿಸಿದ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಎಲ್ಲಾ ಸಂಸದರು ಸಂಸತ್ತಿನಲ್ಲಿ ಪ್ರಶ್ನೆ ಮಾಡಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಇದೆ ವೇಳೆ ಕರೆ ನೀಡಿದರು.

Total Views: 0
Share This Article