ಇಂದಿನಿಂದ ಗೃಹಲಕ್ಷ್ಮೀ 30ನೇ ಕಂತಿನ 2 ಸಾವಿರರೂ. ಫಲಾನುಭವಿಗಳಿಗೆ ಜಮಾ- ರೆಡ್ಡಿ ಶ್ರೀ ನಿವಾಸ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು




From today, Rs. 2,000 of the 30th installment of Grihalakshmi will be deposited to the beneficiaries - Reddy Sri Niwas

ಇಂದಿನಿಂದ ಗೃಹಲಕ್ಷ್ಮೀ 30ನೇ ಕಂತಿನ 2 ಸಾವಿರ
ರೂ. ಫಲಾನುಭವಿಗಳಿಗೆ ಜಮಾ- ರೆಡ್ಡಿ ಶ್ರೀ ನಿವಾಸ

ಜಾಹೀರಾತು


ಕೊಪ್ಪಳ ಮೇ 19 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 30ನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದ್ದು, ಮೇ 20 ರಿಂದ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ಜಮಾ ಆಗಲಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀ ನಿವಾಸ ಅವರು ಹೇಳಿದರು.
 2026ರ ಏಪ್ರಿಲ್ ಮಾಹೆಯಲ್ಲಿ ಕೊಪ್ಪಳ ಜಿಲ್ಲೆಯ 3,09,274 ಮಹಿಳಾ ಫಲಾನುಭವಿಗಳಿಗೆ ಸುಮಾರು ರೂ. 61 ಕೋಟಿ, 85 ಲಕ್ಷದ 48 ಸಾವಿರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆಗೊಳಿಸದ ನಂತರ ಇಲ್ಲಿಯವರೆಗೆ ಕೊಪ್ಪಳ ಜಿಲ್ಲೆಯ ಅರ್ಹ ಮಹಿಳಾ ಫಲಾನುಭವಿಗಳಿಗೆ ಒಟ್ಟು 30 ಕಂತುಗಳಲ್ಲಿ ರೂ. 1860 ಕೋಟಿಗಳನ್ನು ನೇರವಾಗಿ ಆಯಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ. ಈ ಯೋಜನೆಯಡಿ ಒಬ್ಬ ಮಹಿಳಾ ಫಲಾನುಭವಿಗಳಿಗೆ ಇಲ್ಲಿಯವರೆಗೆ ರೂ. 60,000 ಗಳ ಸಹಾಯಧನ ಸಿಕ್ಕಿದಂತಾಗಿದೆ. ಇದರಿಂದ ಮಹಿಳೆಯರ ಆರ್ಥಿಕ ಸ್ವಾವಲಂಭನೆ ಹೆಚ್ಚಾಗಿದೆ. ಮಹಿಳೆಯರಿಗೆ ಕುಟುಂಬದ ನಿರ್ವಹಣೆ, ಮನೆಯ ದೈನಂತಿನ ಖರ್ಚುಗಳಿಗೆ ಸಹಾಯ, ವಿಶೇಷವಾಗಿ ಮಕ್ಕಳ ಶಿಕ್ಷಣಕ್ಕೆ ಗೃಹಲಕ್ಷ್ಮೀ ಯೋಜನೆಯ ಸಹಾಯಧನವು ಅತ್ಯಂತ ಸಹಕಾರಿಯಾಗಿದೆ ಮತ್ತು ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೂ ತುಂಬಾ ಅನುಕೂಲವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಫಲಾನುಭವಿಗಳಿಗೆ ನೇರವಾಗಿ ಸಹಾಯಧನ ದೊರೆಯುವ ಮಹತ್ವದ ಯೋಜನೆ ಇದಾಗಿದೆ ಎಂದರು.
 ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ನುಡಿದಂತೆ ನಡೆಯುತ್ತಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ನಿರ್ದೇಶನದಂತೆ ಮತ್ತು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರ ಹಾಗೂ ಜಿಲ್ಲೆಯ ಸಂಸದರು ಮತ್ತು ಶಾಸಕರ ಮಾರ್ಗದರ್ಶನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
 ತಾಂತ್ರಿಕ ಸಮಸ್ಯೆಗಳಿಂದಾಗಿ ಜಿಲ್ಲೆಯ 1302 ಫಲಾನುಭವಿಗಳ ಸಹಾಯಧನವು ಫಲಾನುಭವಿಗಳಿಗೆ ಜಮಾ ಆಗದೆ ಸರ್ಕಾರಕ್ಕೆ ವಾಪಸ್ ಆಗಿರುತ್ತದೆ. ಈ ಬಗ್ಗೆ ಸಮಸ್ಯೆಯನ್ನು ಸರಿಪಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳ ಸಮಸ್ಯೆಯನ್ನು ಸರಿಪಡಿಸುವಂತೆ ತಿಳಿಸಲಾಗಿದೆ. ಫಲಾನುಭವಿಗಳು ಸಹ ತಮ್ಮ ಬ್ಯಾಂಕ್ ಖಾತೆಯ ಇ-ಕೆವೈಸಿ, ಆಧಾರ್ ಲಿಂಕ್, ಬ್ಯಾಂಕ್ ಸೀಡಿಂಗ್ ಮತ್ತು ಇತರೆ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಗೃಹಲಕ್ಷ್ಮೀ ಯೋಜನೆಯ ಸಹಾಯಧನ ಪಡೆದುಕೊಳ್ಳಬೇಕು ಎಂದರು.
 ಈ ಬಾರಿಯ ಗೃಹಲಕ್ಷ್ಮೀ ಯೋಜನೆಯ ಸಹಾಯಧನ ಮೊತ್ತವನ್ನು ಖಜಾನೆ ಇಲಾಖೆಯ ಎನ್.ಟಿ.ಟಿ.ಎ.ಐ ವರ್ಗಾವಣೆ ಮೂಲಕ ಪಾವತಿಸಲಾಗಿದ್ದು, ಮೇ 19 ರಿಂದ ಗೃಹಲಕ್ಷ್ಮೀ ಯೋಜನೆಯ ಕೊಪ್ಪಳ ಜಿಲ್ಲೆಯ ಎಲ್ಲಾ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಒಂದೇ ಬಾರಿಗೆ ಸಹಾಯಧನ ಜಮಾ ಆಗಲಿದೆ. ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಜಿಲ್ಲೆಯ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರವಾಗಿ ರಾಜ್ಯ ಸರ್ಕಾರಕ್ಕೆ ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀ ನಿವಾಸ ಅವರು ಹೇಳಿದರು.

Total Views: 1
Share This Article