ಮೇ 20ರಿಂದ ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯಆಹಾರ ಆಯೋಗದ ಅಧ್ಯಕ್ಷರು, ಸದಸ್ಯರ ಪ್ರವಾಸ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು




Karnataka State Food Commission Chairman, Members to visit Koppal district from May 20

ಮೇ 20ರಿಂದ ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ
ಆಹಾರ ಆಯೋಗದ ಅಧ್ಯಕ್ಷರು, ಸದಸ್ಯರ ಪ್ರವಾಸ

ಜಾಹೀರಾತು


‎ಕೊಪ್ಪಳ ಮೇ 19 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಮೇ 20 ರಿಂದ ಮೇ 21ರವರೆಗೆ ಕೊಪ್ಪಳ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗವು ಕೊಪ್ಪಳ ಜಿಲ್ಲೆಗೆ ಭೇಟಿ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ, ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಕೃಷಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಇಲಾಖೆ ಮತ್ತು ಸರ್ಕಾರಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಇದಕ್ಕೆ ಸಂಬAಧಿಸಿದAತೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಅವರು ಹಾಗೂ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ.ದೊಡ್ಡಲಿAಗಣ್ಣವರ, ಎ.ರೋಹಿಣಿ ಪ್ರಿಯ ಮತ್ತು ಕೆ.ಎಸ್.ವಿಜಯಲಕ್ಷ್ಮಿ ಹಾಗೂ ಸದಸ್ಯ ಕಾರ್ಯದರ್ಶಿ ಸುಜಾತ ಡಿ ಹೊಸಮನಿ ಅವರು ಕೊಪ್ಪಳ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ವಿವಿಧ ಇಲಾಖೆಗಳ ಪರಿಶೀಲನೆ ನಡೆಸುವರು. ಮತ್ತು ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬಳಿಕ ಕೇಂದ್ರಸ್ಥಾನಕ್ಕೆ ವಾಪಸ್ಸು ತೆರಳುವರು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ ಕಾರ್ಯದರ್ಶಿ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ನಿರ್ದೇಶಕರು-2 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article