Publication of list of students' marks in entrance exams of prestigious schools: Objections invitedಪ್ರತಿಷ್ಠಿತ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ
ಅಂಕಗಳ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಆಹ್ವಾನ

ಕೊಪ್ಪಳ ಮೇ 19 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇಸಾಲಿನ ಕೊಪ್ಪಳ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಿ, ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿ, ವಿದಾರ್ಥಿನಿಯರು ಪಡೆದ ಅಂಕಗಳ ಮಾಹಿತಿಗಾಗಿ ಉಪನಿರ್ದೇಶಕರು ಕಛೇರಿ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಮತ್ತು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ಹಾಗೂ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಕುಷ್ಟಗಿ, ಗಂಗಾವತಿ ಇವರ ಕಛೇರಿಯನ್ನು ಸಂಪರ್ಕಿಸಬುಹುದಾಗಿದೆ ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಆಕ್ಷೇಪಣೆ ಇದ್ದಲ್ಲಿ ಮೇ 22 ರೊಳಗಾಗಿ ಆಕ್ಷೇಪಣೆ ಸಲ್ಲಿಸಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

