ಮೇ 30ರಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

District Guarantee Scheme Implementation Progress Review Meeting on May 30th

ಜಾಹೀರಾತು

ಮೇ 30ರಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ


ಕೊಪ್ಪಳ ಮೇ 21 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕೊಪ್ಪಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಮೇ 30 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
 ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article