
Dalit Army elects office bearers for new organizations.

ದಲಿತ ಸೇನೆ ನೂತನ ಸಂಘಟನೆಗಳ ಪದಾಧಿಕಾರಿಗಳ ಆಯ್ಕೆ.

ಶಿಕ್ಷಣದಿಂದ ಮಾತ್ರ ದಲಿತರ ವಿಮೋಚನೆ ಸಾಧ್ಯ: ದಲಿತ ಸೇನೆ ಜಿಲ್ಲಾಧ್ಯಕ್ಷ ಉಡುಚಪ್ಪ.
ಗಂಗಾವತಿ: ಶತಶತಮಾನಗಳಿಂದ ಶೋಷಣೆಗೆ ಒಳಗಾದ ದಲಿತ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣದಿಂದ ಮಾತ್ರ ವಿಮೋಚನೆ ಸಾಧ್ಯ ಎಂಬ ಅಭಿಪ್ರಾಯವನ್ನು ದಲಿತ ಸೇನೆಯ ಜಿಲ್ಲಾಧ್ಯಕ್ಷ ಉಡುಚಪ್ಪ ಹೇಳಿದರು.
ಅವರು ರವಿವಾರದಂದು ಸರ್ಕಿಟ್ ಹೌಸಿನಲ್ಲಿ ದಲಿತ ಸೇನೆಯ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕಂಡಂತೆ ಅವರ ಆಶಯದಂತೆ ಶಿಕ್ಷಣ ಸಂಘಟನೆ ಹೋರಾಟ ಅವುಗಳ ಜೊತೆಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಪಡೆದುಕೊಂಡು ಸಮಾಜದಲ್ಲಿ ಸ್ಥಾನಮಾನ ಪಡೆದುಕೊಳ್ಳುವಂತಾಗಬೇಕು. ಇದಕ್ಕಾಗಿ ಸಂಘಟನೆಯ ಪದಾಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಚಾಚೂ ತಪ್ಪದೇ ಯಾವುದೇ ಸಮಾಜದ ಮಗು ಶಿಕ್ಷಣದ ಸೌಲಭ್ಯದಿಂದ ವಂಚಿತರಾಗದಂತೆ ಶಾಲೆಗೆ ಕಳಿಸುವಂತಾಗಬೇಕು. ಜೊತೆಗೆ ಸರ್ಕಾರದಿಂದ ದೊರೆಯಬಹುದಾದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಅತ್ಯಂತ ಪ್ರಾಮಾಣಿಕವಾಗಿ ಕಾರ್ಯಪ್ರವೃತ್ತರಾಗಬೇಕೆಂದು ಕರೆ ನೀಡಿದರು.
ಪ್ರಗತಿನಗರದ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ದುರ್ಗಾರಾಜ್, ಗಂಗಾವತಿ ನಗರ ಘಟಕದ ಅಧ್ಯಕ್ಷರನ್ನಾಗಿ ವಿರುಪಣ್ಣ ಸಂಗಾಪುರ್ ಅವರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಿ ಆದೇಶ ಪತ್ರವನ್ನು ನೀಡಿದರು.
ಇದೇ ವೇಳೆ ಜಿಲ್ಲೆಯ ಹಾಗೂ ತಾಲೂಕಿನ ಹಾಗೂ ಗ್ರಾಮದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಇದಕ್ಕೂ ಪೂರ್ವದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಮಂಜುನಾಥ್, ವಕೀಲ ವೀರೇಶ ಈಳಿಗನೂರು, ಶಿವಕುಮಾರ್ ಡಿ., ಪರಶುರಾಮ್, ಮಂಜುನಾಥ, ಕೃಷ್ಣ, ಶಿವ, ಜಗದೀಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
