ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವದು ಬೇಡ –ಸರ್ಕಾರಕ್ಕೆ ಮ್ಯಾಗಳಮನಿ ಒತ್ತಾಯ.

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

No need to merge government schools - Magalamani urges government

ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವದು ಬೇಡ –ಸರ್ಕಾರಕ್ಕೆ ಮ್ಯಾಗಳಮನಿ ಒತ್ತಾಯ.

ಜಾಹೀರಾತು

ಗಂಗಾವತಿ ,25: ರಾಜ್ಯದಲ್ಲಿ ಕಡಿಮೆ ಮಕ್ಕಳ ಸಂಖ್ಯೆ ಇರುವ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಬಿಡಬೇಕು ಎಂದು ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.1996 ರಲ್ಲಿ ಇಪ್ಪತ್ತು ಕುಟುಂಬಗಳು ಇರುವ ಪ್ರದೇಶಗಲ್ಲಿ ಅಲ್ಲಿನ ಬಡ ಮಕ್ಕಳಿಗೆ ಶಿಕ್ಷಣ ದೊರೆಯಲಿ ಎಂಬ ಉದ್ದೇಶದಿಂದ ಡಿ. ಪಿ ಇ. ಪಿ ಯೋಜನೆಯಲ್ಲಿ ಶಾಲೆಗಳನ್ನು ಪ್ರಾರಂಭ ಮಾಡಿ ಆಗಿನ ಸರ್ಕಾರ ಅನುಕೂಲ ಕಲ್ಪಿಸಿಕೊಡುವ ಒಳ್ಳೆಯ ಕಾರ್ಯ ಮಾಡಿತ್ತು. ಎಲ್ಲಾ ಸರ್ಕಾರಗಳು ನೀತಿ ನಿಯಮಗಳನ್ನು ಮೀರಿ ಹಾಗೂ ನಿಯಮಗಳನ್ನು ಸಡಿಲಗೊಳಿಸಿ ಇಂಗ್ಲಿಷ್ ಶಾಲೆಗಳಿಗೆ ಅನುಮತಿ ನೀಡಿದ ಪರಿಣಾಮವಾಗಿ ಇಂದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕ್ಷೀಣಿಸುತ್ತಾ ಬಂದಿದೆ. ಈಗಿನ ಸರ್ಕಾರ ಇದೇ ನೆಪ ಇಟ್ಟುಕೊಂಡು ಸರ್ಕಾರ ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದರಿಂದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಅಲ್ಲದೇ ಶಿಕ್ಷಣ ಹಕ್ಕು ಕಸಿದುಕೊಂಡO ತಾಗುತ್ತದೆ. ಸರ್ಕಾರವು ಕೂಡ ಪರೋಕ್ಷವಾಗಿ ಖಾಸಗಿ ಶಾಲೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಖಾಸಗಿ ಶಾಲೆಗಳಿಗೆ ಅನುಮತಿ ನೀಡುವಾಗ ನಿಯಮಗಳನ್ನು ಬಿಗಿಗೊಳಿಸಬೇಕು. ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈ ಬಿಟ್ಟು ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಮಾಡುವದು,ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಸಕಾಲಕ್ಕೆ ಒದಗಿಸಬೇಕು. ಅನ್ಯ ಕಾರ್ಯಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡದೇ ಬೋಧನೆಗೆ ಮಾತ್ರ ಸೀಮಿತಗೊಳಿಸುವದರ ಮೂಲಕ ಸರ್ಕಾರಿ ಶಾಲೆಗಳನ್ನು ಸಭಲೀಕರಣಗೊಳಿಸಿ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಬೇಕೆಂದು ಮ್ಯಾಗಳಮನಿ ಸರ್ಕಾವನ್ನು ಒತ್ತಾಯಿಸಿದ್ದಾರೆ.

Total Views: 0
Share This Article