
Applications invited online for National Award for Persons with Disabilities
ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ

ಕೊಪ್ಪಳ ಮೇ 30 (ಕರ್ನಾಟಕ ವಾರ್ತೆ): 2026-27ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ನೀಡಲಾಗುವ ವಿಕಲಚೇತನರ ರಾಷ್ಟ್ರ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆಯ ಸಮಾರಂಭದಲ್ಲಿ ವಿಕಲಚೇತನರ ವಿವಿಧ ಕ್ಷೇತ್ರಗಳಲ್ಲಿ ಅಂದರೆ, ಸಬಲೀಕರಣ, ಪುನರ್ವಸತಿ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ತಡೆರಹಿತ ವಾತಾವರಣ, ಸಂಶೋಧನೆ, ನಾವಿನ್ಯತೆ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದ್ದು, ಅಗತ್ಯ ದಾಖಲಾತಿಗಳೊಂದಿಗೆ ಪ್ರಸ್ತಾವನೆಯನ್ನು ಭಾರತ ಸರಕಾರದ ವೈಬ್‌ಸೈಟ್ www.awards.gov.inನಲ್ಲಿ ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಕಛೇರಿಗೆ ದ್ವಿ-ಪ್ರತಿಯಲ್ಲಿ ಹಾರ್ಡ ಪ್ರತಿಯನ್ನು ಸಲ್ಲಿಸಬೇಕು. ಅರ್ಹತಾ ಮಾನದಂಡಗಳು ಮತ್ತು ಇತರ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ www.depwd.gov.in ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ವಿವಿಧ ತಾಲೂಕು ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ, ನಗರಸಭೆ ಅಥವಾ ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ಇವರನ್ನು ಹಾಗೂ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ: 08539-295496 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
