ಕೆಪಿಸಿಸಿ ಅಧ್ಯಕ್ಷರನ್ನಾಗಿ ಸತೀಶ್ ಜಾರಕಿಹೊಳಿ ಹಾಗೂ ಸಚಿವರನ್ನಾಗಿ ನೇಮಕಕ್ಕೆ ಮನವಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Appeal to appoint Satish Jarkiholi as KPCC President and Minister

ಕೆಪಿಸಿಸಿ ಅಧ್ಯಕ್ಷರನ್ನಾಗಿ ಸತೀಶ್ ಜಾರಕಿಹೊಳಿ ಹಾಗೂ ಸಚಿವರನ್ನಾಗಿ ನೇಮಕಕ್ಕೆ ಮನವಿ

ಜಾಹೀರಾತು

ಗಂಗಾವತಿ, ಮೇ 31: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ನೇಮಕ ಮಾಡಬೇಕು ಹಾಗೂ ರಾಜ್ಯ ಸಚಿವ ಸಂಪುಟದಲ್ಲಿ ಅವರಿಗೆ ಮಹತ್ವದ ಜವಾಬ್ದಾರಿ ನೀಡಬೇಕು ಎಂದು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ಯುವ ಮುಖಂಡ ಜೋಗಿನ್ ರಮೇಶ್ ನಾಯಕ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ಸನ್ಮಾನ್ಯ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಉನ್ನತ ನಾಯಕತ್ವಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಜೋಗಿನ್ ರಮೇಶ್ ನಾಯಕ ಅವರು, ಸತೀಶ್ ಜಾರಕಿಹೊಳಿ ಅವರು ಪಕ್ಷದ ಸಂಘಟನೆ ಬಲವರ್ಧನೆ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಕಾರ್ಯಗಳ ಮೂಲಕ ರಾಜ್ಯದ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಾಮರ್ಥ್ಯ ಸತೀಶ್ ಜಾರಕಿಹೊಳಿ ಅವರಿಗೆ ಇದೆ. ಅವರ ನಾಯಕತ್ವದಲ್ಲಿ ಪಕ್ಷವು ಗ್ರಾಮೀಣ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಮತ್ತಷ್ಟು ಸಂಘಟಿತವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಪ್ರಮುಖ ಜವಾಬ್ದಾರಿ ನೀಡುವುದು ಸೂಕ್ತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವವು ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಪಕ್ಷದ ಹಿತದೃಷ್ಟಿಯಿಂದ ಸತೀಶ್ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಾಗೂ ಸಚಿವರನ್ನಾಗಿ ನೇಮಕ ಮಾಡುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕೆಂದು ಜೋಗಿನ್ ರಮೇಶ್ ನಾಯಕ ಮನವಿ ಮಾಡಿದ್ದಾರೆ.

Total Views: 0
Share This Article