ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
B.Z. Demand to give DCM post to Zameer Ahmed Khan




ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ

ಜಾಹೀರಾತು

ಗಂಗಾವತಿ, ಜೂನ್ 2: ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾಗಿರುವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಮಾಜಿ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹನೀಫ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷದ ಬೆಳವಣಿಗೆ ಹಾಗೂ ಸಂಘಟನೆ ಬಲವರ್ಧನೆಯಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಕೊಡುಗೆ ಅಪಾರವಾಗಿದೆ. ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು ಪಕ್ಷದ ನಿಷ್ಠಾವಂತ ಹಾಗೂ ಜನಪರ ನಾಯಕರಾಗಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರಕಬೇಕಾದ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದು ಸಮಂಜಸವಾಗಿರುತ್ತದೆ. ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಅಲ್ಪಸಂಖ್ಯಾತ ಸಮುದಾಯದ ವಿಶ್ವಾಸ ಮತ್ತಷ್ಟು ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟರು.

ಹೀಗಾಗಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮೊಹಮ್ಮದ್ ಹನೀಫ್ ಆಗ್ರಹಿಸಿದ್ದಾರೆ.

Total Views: 0
Share This Article