
Karnataka State Pollution Control Board celebrates Environment Day

ರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ರಾಯಚೂರು ಇದರ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿ, ನಮ್ಮ ಜೀವನದ ಆಧಾರವಾದ ಗಾಳಿ, ನೀರು ಮತ್ತು ಭೂಮಿಯನ್ನು ಸ್ವಚ್ಛವಾಗಿಟ್ಟುಕೊಂಡರೆ ಮಾತ್ರ ನಮ್ಮ ಆರೋಗ್ಯ ಮತ್ತು ಜೀವನವೂ ಸ್ವಚ್ಛ ಹಾಗೂ ಸುರಕ್ಷಿತವಾಗಿರುತ್ತದೆ ಎಂದು ಹೇಳಿದರು.
ಪ್ರಕೃತಿಯ ಈ ಮೂರು ಮೂಲಭೂತ ಸಂಪನ್ಮೂಲಗಳಲ್ಲಿ ಯಾವುದೇ ರೀತಿಯ ಮಾಲಿನ್ಯ ಉಂಟಾದರೆ ಅದರ ಪರಿಣಾಮ ಮಾನವನ ಆರೋಗ್ಯದ ಮೇಲೆ ಬೀಳುತ್ತದೆ. ಭವಿಷ್ಯದಲ್ಲಿ ವಿವಿಧ ರೀತಿಯ ಅನಾರೋಗ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಅತಿಯಾದ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳು (Pesticides) ಹಾಗೂ ಇತರೆ ರಾಸಾಯನಿಕಗಳ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದರ ಜೊತೆಗೆ ಮುಂದಿನ ಪೀಳಿಗೆಯ ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ Reduce, Reuse and Recycle (ಕಡಿಮೆ ಬಳಕೆ, ಮರುಬಳಕೆ ಮತ್ತು ಮರುಸಂಸ್ಕರಣೆ) ಎಂಬ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಡಿಮೆ ತ್ಯಾಜ್ಯ ಉತ್ಪಾದಿಸಬೇಕು ಹಾಗೂ ಉತ್ಪಾದನೆಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ವಿಶೇಷವಾಗಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಅದು ಗಾಳಿ ಮತ್ತು ನೀರಿನ ಮೂಲಕ ಪರಿಸರದಾದ್ಯಂತ ಹರಡಿ ಮಾಲಿನ್ಯ ಉಂಟುಮಾಡುತ್ತದೆ. ಆದ್ದರಿಂದ ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಬಳಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಪರಿಸರದ ಬಗ್ಗೆ ಎಚ್ಚರಿಕೆ ವಹಿಸಿದರೆ ಮಾತ್ರ ಮುಂದಿನ ಪೀಳಿಗೆಗೆ ಆರೋಗ್ಯಕರ ಮತ್ತು ಸುರಕ್ಷಿತ ಭವಿಷ್ಯವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. ಗ್ರೀನ್ ರಾಯಚೂರು ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಸರಸ್ವತಿ ಕಿಲಿಕಿಲಿಯವರು ಮಾತನಾಡುತ್ತಾ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮವನ್ನು ಸ್ಪರ್ಧಾ ಯೋಜನೆಯನ್ನ ಮಾಡಲಾಗಿದೆ ವಿದ್ಯಾರ್ಥಿಗಳು ಧೈರ್ಯವಾಗಿ ಭಾಗವಹಿಸಿರಿ ಈ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವಲ್ಲಿ ಅನುಕೂಲವಾಗುತ್ತದೆ ಎಂದು ಹೇಳಿದರು. ಗಣ ತ್ಯಾಜ್ಯ ವಸ್ತುಗಳ ವಿಲೇವಾರಿ ಮತ್ತು ತ್ರೀ ಆರ್ ಇವುಗಳು ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಶ್ರೀ ಗಿರೀಶ್ ಸಾಯಕ ಪರಿಸರ ಅಧಿಕಾರಿಗಳು ರಾಯಚೂರು ಭಾರತೀಯ ರೆಡ್ ಕಾ ಸಂಸ್ಥೆಯ ಜಿಲ್ಲಾ ಸಂಚಾಲಕರಾದ ಡಾ. ದಂಡಪ್ಪ ಬಿರಾದಾರ್ಉಪನ್ಯಾಸಕರಾದ ಮಲ್ಲನ ಗೌಡ್ರು ಎಸ್. ಎನ್. ಜ್ಯೋತಿ ಗುರುರಾಜ ಪನ್ನೂರು ಅನುಪಮ .ನಾಗವೇಣಿ ಸಾರೊಡೆ ಸೇರಿದಂತೆ ಇನ್ನಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

