ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Free bus passes for rural journalists: Applications invited

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ಜಾಹೀರಾತು


ಕೊಪ್ಪಳ ಜೂನ್ 04 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ ‘ಸೇವಾಸಿಂಧು” ಪೋರ್ಟಲ್  https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್‌ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ.
ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾಸಿಂಧು” ಪೋರ್ಟಲ್ ಮೂಲಕ ಜೂನ್ 20ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article