2026-27ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Online applications invited for admission to minority hostels for the year 2026-27






2026-27ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಜಾಹೀರಾತು

ಗಂಗಾವತಿ, ಜೂನ್ 4: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026-27ನೇ ಸಾಲಿನ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.

ಗಂಗಾವತಿ-01, ಗಂಗಾವತಿ-02, ಕಾರಟಗಿ ಹಾಗೂ ಶ್ರೀರಾಮನಗರದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಗಳು ಹಾಗೂ ಗಂಗಾವತಿಯ ಬಾಲಕಿಯರ ವಸತಿನಿಲಯಗಳಿಗೆ ಪ್ರವೇಶ ನೀಡಲಾಗುತ್ತಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಎಸ್‌.ಸಿ., ಎಸ್‌.ಟಿ. ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ಪಿ.ಯು.ಸಿ., ಐ.ಟಿ.ಐ., ಡಿಪ್ಲೊಮಾ ಹಾಗೂ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ https://shp.karnataka.gov.in/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 5, 2026ರಿಂದ ಆರಂಭವಾಗಲಿದ್ದು, ಜೂನ್ 30, 2026 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ, ಗಂಗಾವತಿ ಹಾಗೂ ಸಂಬಂಧಿಸಿದ ವಿದ್ಯಾರ್ಥಿನಿಲಯಗಳ ನಿಲಯಪಾಲಕರನ್ನು ಸಂಪರ್ಕಿಸಬಹುದಾಗಿದೆ. ಕಾರ್ಯಾಲಯವು ಗಂಗಾವತಿಯ ಜೂನಿಯರ್ ಕಾಲೇಜು ಆವರಣದಲ್ಲಿರುವ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೂರವಾಣಿ ಸಂಖ್ಯೆ 08533-230027 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 1
Share This Article