ಆನೆಗುಂದಿಯಲ್ಲಿ ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Unknown person dies in Anegundi: Appeal to find heirs

ಆನೆಗುಂದಿಯಲ್ಲಿ ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ

ಜಾಹೀರಾತು


ಕೊಪ್ಪಳ ಜೂನ್ 09 (ಕರ್ನಾಟಕ ವಾರ್ತೆ): ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಅಗಸಿ ಕಟ್ಟೆಯ ಮೇಲೆ ಅಪರಿಚಿತ ವ್ಯಕ್ತಿಯು ಮೃತಪಟ್ಟಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕಾರಿಸುವಂತೆ ಗಂಗಾವತಿ ಗ್ರಾಮೀಣ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
 ಪೊಲೀಸರ ಮಾಹಿತಿ ಪ್ರಕಾರ, ಜೂನ್ 5 ರಂದು ಸಂಜೆ ಸುಮಾರು 7 ಗಂಟೆ ವೇಳೆಗೆ ಆನೆಗುಂದಿ ಗ್ರಾಮದ ಅಗಸಿ ಕಟ್ಟೆಯ ಮೇಲೆ ವ್ಯಕ್ತಿಯೊಬ್ಬರು ಮಲಗಿರುವುದನ್ನು ಗಮನಿಸಿದ ಸ್ಥಳೀಯರು ಪರಿಶೀಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಬಳಿಕ ಆನೆಗುಂದಿ ಗ್ರಾಮ ಪಂಚಾಯತ್‌ನ ವಾಟರ್‌ಮ್ಯಾನ್ ಚಂದ್ರಶೇಖರ್ ತಂದೆ ಜಯರಾಮರಾಜು ಎಂಬುವವರು ಸಾರ್ವಜನಿಕರ ನೆರವಿನೊಂದಿಗೆ ಆ ವ್ಯಕ್ತಿಯ ಮೃತದೇಹವನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಸಾಗಿಸಿದ್ದಾರೆ.
 ಸ್ಥಳೀಯರ ಮಾಹಿತಿಯಂತೆ, ಮೃತ ವ್ಯಕ್ತಿಯು ಕಳೆದ ಒಂದು ವಾರದಿಂದ ಆನೆಗುಂದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಲೆದಾಡುತ್ತಿದ್ದು, ಯಾವುದೋ ಅನಾರೋಗ್ಯದಿಂದ ಬಳಲುತ್ತಿದ್ದನು ಎಂದು ತಿಳಿದುಬಂದಿದೆ. ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 20/2026 ಅಡಿಯಲ್ಲಿ ಕಲಂ 194 ಬಿ.ಎನ್.ಎಸ್.ಎಸ್-2023 ರನ್ವಯ ಪ್ರಕರಣ ದಾಖಲಿಸಲಾಗಿದೆ.
 ಮೃತ ವ್ಯಕ್ತಿಯ ವಯಸ್ಸು ಅಂದಾಜು 35 ರಿಂದ 40 ವರ್ಷಗಳಾಗಿದ್ದು, ಸುಮಾರು 5.1 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹಾಗೂ ಕಪ್ಪು ಕೂದಲನ್ನು ಹೊಂದಿದ್ದಾರೆ. ಮೈಮೇಲೆ ಬಿಳಿ ಬಣ್ಣದ ಚೌಕಡಿ ಫುಲ್ ಶರ್ಟ್ ಹಾಗೂ ನೀಲಿ ಬಣ್ಣದ ಚೌಕಡಿ ಲುಂಗಿ ಇರುತ್ತದೆ. ಈ ಮೃತ ವ್ಯಕ್ತಿಯ ಗುರುತು ಅಥವಾ ಅವರ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ದೂರವಾಣಿ: 08533-230854 ಅಥವಾ ಮೊಬೈಲ್ ಸಂಖ್ಯೆ: 9480803730 ನ್ನು ಸಂಪರ್ಕಿಸುವAತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 1
Share This Article