ಅಥಣಿ: ಬಿತ್ತನೆ ಬೀಜ, ರಸಗೊಬ್ಬರ ಕಾಳಸಂತೆ ತಡೆಗೆ ಕೃಷಿ ಇಲಾಖೆಗೆ ಜಂಟಿ ಮನವಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Athani: Joint appeal to the Agriculture Department to prevent blackening of sowing seeds and fertilizers

ಅಥಣಿ: ಬಿತ್ತನೆ ಬೀಜ, ರಸಗೊಬ್ಬರ ಕಾಳಸಂತೆ ತಡೆಗೆ ಕೃಷಿ ಇಲಾಖೆಗೆ ಜಂಟಿ ಮನವಿ

ಜಾಹೀರಾತು


ಅಥಣಿ: ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ರೈತರಿಗೆ ಯಾವುದೇ ಕೊರತೆಯಾಗದಂತೆ ಸಕಾಲದಲ್ಲಿ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸರ್ಕಾರಿ ಸಹಾಯಧನದಡಿ ವಿತರಿಸಬೇಕು ಹಾಗೂ ಖಾಸಗಿ ಅಂಗಡಿಗಳ ದೋಚಾಟಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಿಂಗಣ್ಣ ಬಿರಾದಾರ ಅವರಿಗೆ ಜಂಟಿ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಹಾಗೂ ಸಾಮಾಜಿಕ ಹೋರಾಟಗಾರ ಪ್ರವೀಣ ನಾಯಿಕ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ಉತ್ತರ ಕರ್ನಾಟಕ ಗೌರವಾಧ್ಯಕ್ಷ ರಮೇಶ ಮಡಿವಾಳ ನೇತೃತ್ವದಲ್ಲಿ ಈ ಮನವಿ ಸಲ್ಲಿಸಲಾಯಿತು.
ಖಾಸಗಿ ಅಂಗಡಿಗಳಲ್ಲಿ ಸರ್ಕಾರದ ನಿಗದಿತ ದರಕ್ಕಿಂತ (ಯೂರಿಯಾ ₹266) ಹೆಚ್ಚಿನ ಹಣ ಪಡೆಯಲಾಗುತ್ತಿದೆ ಮತ್ತು ಗೊಬ್ಬರದ ಜೊತೆ ಬೇರೆ ಉತ್ಪನ್ನಗಳನ್ನು ಲಿಂಕ್ ಮಾಡಿಕೊಡುತ್ತಾ ಮುಗ್ಧ ರೈತರಿಗೆ ವಂಚಿಸಲಾಗುತ್ತಿದೆ ಎಂದು ಸಂಘಟನೆಯ ಮುಖಂಡರು ಕಿಡಿಕಾರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ ನಿಂಗಣ್ಣ ಬಿರಾದಾರ, “ಯಾವುದೇ ಲಿಂಕ್ ಕಡ್ಡಾಯವಿಲ್ಲ, ನಿಯಮ ಉಲ್ಲಂಘಿಸುವ ವ್ಯಾಪಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಅನಿಲ ಭಾಮನೆ, ಕಿರಣ ಪಾಟೋಳೆ, ಶರಣಪ್ಪಾ ಶಿಂಧೆ, ಎಂ. ಶರ್ಮಾ, ಅಮೂಲ ಚವಾಣ, ಶಿವಾನಂದ ನಾವಿ, ಸರಸ್ವತಿ ನೇಮಗೌಡ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

Total Views: 0
Share This Article