
Free bus pass facility for all school and college students
ಎಲ್ಲಾ ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ

ಕೊಪ್ಪಳ ಜೂನ್ 15 (ಕರ್ನಾಟಕ ವಾರ್ತೆ): ಎಲ್ಲಾ ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಜೂನ್ 12 ರಿಂದ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಲ್ಲಿ ಸರ್ಕಾರದ ನಿರ್ದೇಶನದಂತೆ 2026-27ನೇ ಸಾಲಿನಲ್ಲಿ ಸೇವಾ ಸಿಂಧು ಪೋರ್ಟಲ್, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಎಲ್ಲಾ ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಕರ್ನಾಟಕ-1, ಗ್ರಾಮ-1 ಕೇಂದ್ರಗಳ ಮುಖಾಂತರ (URL-Sevasindhu.karnataka.gov.in) ಉಚಿತ ಬಸ್ ಪಾಸ್‌ಗಳನ್ನು ವಿತರಿಸಲಾಗುತ್ತಿದ್ದು, ಈಗಾಗಲೇ ವಿತರಿಸಿರುವ ಪಾಸ್‌ಗಳು ಚಾಲ್ತಿಯಲ್ಲಿರುತ್ತವೆ ಮತ್ತು ವಿದ್ಯಾರ್ಥಿಗಳು ಪಾವತಿಸಿದ ಪಾಸಿನ ಶುಲ್ಕಗಳ ಒಟ್ಟು ಮೊತ್ತವನ್ನು ಮರುಪಾವತಿಸಲಾಗುವುದು. ಕೊಪ್ಪಳ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
