
Invitation letter for 2nd International Karate Tournament released

2ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯ ಆಹ್ವಾನ ಪತ್ರಿಕೆ ಬಿಡುಗಡೆ

ಕೊಪ್ಪಳ: ಇಂದು ಕೊಪ್ಪಳ ಜಿಲ್ಲಾ ಲೋಕಸಭಾ ಕಾರ್ಯಾಲಯದಲ್ಲಿ 2ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಸಂಸದರಾದ ರಾಘವೇಂದ್ರ ಹಿಟ್ನಾಳರವರು ಗಂಗಾವತಿಯ ನಗರದ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ದಿನಾಂಕ 26-07-2026 (ಭಾನುವಾರ) ರಂದು ನಡೆಯಲಿರುವ 2ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯ ಆಹ್ವಾನ ಪತ್ರಿಕೆಯನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಗೌರವಾನ್ವಿತ ಸಂಸದರಾದ ಶ್ರೀ ರಾಜಶೇಖರ್ ಹಿಟ್ನಾಳ್ ಅವರು ಅಧಿಕೃತವಾಗಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಈ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಾಜ್ಯ, ರಾಷ್ಟ್ರ ಹಾಗೂ ವಿವಿಧ ದೇಶಗಳಿಂದ ಸುಮಾರು 1,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿ, ಸ್ಪರ್ಧೆಯ ಯಶಸ್ಸಿಗೆ ಶುಭ ಹಾರೈಸಿದರು. ಅಲ್ಲದೆ, ಇದೇ ಪಂದ್ಯಾವಳಿಯ ಉದ್ಘಾಟಕರಾಗಿ ಆಗಮಿಸುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಮೌನೇಶ್ ವಿ, ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಟ್ರಸ್ಟ್ (ರಿ.) ಸಂಸ್ಥೆಯ ಅಧ್ಯಕ್ಷರಾದ ಡಾ. ಸಿಹಾನ್ ಜಬಿವುಲ್ಲಾ, ಕೊಪ್ಪಳ ನಗರದ ಕರಾಟೆ ಶಿಕ್ಷಕರಾದ ಅಶೋಕ್ ನರಗುಂದ್ ಹಾಗೂ ವಿಠಲಕುಮಾರ್ ಸೋಮಲಿಂಗ ಉಪಸ್ಥಿತರಿದ್ದರು.
