
Plant a tree in the name of your parents; save the environment: Geeta Chaudhary

ತಂದೆ-ತಾಯಿ ಹೆಸರಲ್ಲಿ ಒಂದು ಗಿಡ ಬೆಳೆಸಿ; ಪರಿಸರ ಉಳಿಸಿ: ಗೀತಾ ಚೌದರಿ

ಗಂಗಾವತಿ: ಹಿರೇಜಂತಕಲ್‌ನ ಹುಮಾ ಆಂಗ್ಲ ಮಾದ್ಯಮ ಶಾಲೆಯಲ್ಲಿ ಇಂದು ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಕ್ಲಬ್ ರೈಸ್ ಮಿಲ್ ಅಧ್ಯಕ್ಷೆ ಗೀತಾ ಚೌದರಿ ಅವರು ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ, ಪ್ರತಿಯೊಬ್ಬರೂ ತಮ್ಮ ತಂದೆ-ತಾಯಿಯ ಹೆಸರಲ್ಲಿ ಕನಿಷ್ಠ ಒಂದು ಗಿಡವನ್ನು ನೆಟ್ಟು ಪೋಷಿಸುವಂತೆ ಕರೆ ನೀಡಿದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮರಗಳನ್ನು ಬೆಳೆಸುವುದರಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಬಹುದು ಎಂದು ಅವರು ತಿಳಿಸಿದರು. ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸದಸ್ಯರಾದ ಸೋಪಿಯರಾಣಿ,ಶ್ರೀದೇವಿ, ಬಸಮ್ಮ,ನಾಗವೀಣಿ,ರಾಜೇಶ್ವರಿ, ನಾಗರತ್ನ, ಹಾಗೂ ಸಂಸ್ಥೆಯ ಅಧ್ಯಕ್ಷರು ಹಾಗೂ
ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು. ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.
