ಯಲಬುರ್ಗಾ: ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Yelaburga: Applications invited under various schemes of the Horticulture Department




ಯಲಬುರ್ಗಾ: ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಜಾಹೀರಾತು

ಕೊಪ್ಪಳ ಜೂನ್ 20, (ಕರ್ನಾಟಕ ವಾರ್ತೆ): ಯಲಬುರ್ಗಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
2026-27 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸ ಪ್ರದೇಶ ವಿಸ್ತರಣೆ, ಸಂರಕ್ಷಿತ ಬೇಸಾಯ, ನೀರು ಸಂಗ್ರಹಣಾ ಘಟಕ, ಕೊಯ್ಲೋತ್ತರ ನಿರ್ವಹಣೆ, ಯಾಂತ್ರೀಕರಣ ಮತ್ತು ಆರ್.ಕೆ.ವಿ.ವೈ ಯೋಜನೆಯಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ
 ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳಲು ಇಚ್ಛಿಸುವ ರೈತರು ಮತ್ತು ಸೋಲಾರ ಪಂಪ್‌ಸೆಟ್, ಯಾಂತ್ರೀಕರಣ, ಡಿ.ಸಿ.ಸಿ.ಡಿ ವತಿಯಿಂದ ಗೋಡಂಬಿ ಪ್ರದೇಶ ವಿಸ್ತರಣೆ ಮಾಡಲು ಅಳವಡಿಸಿಕೊಳ್ಳುವ ರೈತರು ಇಲಾಖಾ ಮಾರ್ಗಸೂಚಿಯ ಪ್ರಕಾರ ಅರ್ಜಿ ಸಲ್ಲಿಸಲು ಕೋರಲಾಗಿದೆ. ಫಲಾನುಭವಿಯ ಆಯ್ಕೆಯು ಅನುದಾನದ ಲಭ್ಯತೆ ಮತ್ತು ಜೇಷ್ಠತೆ ಆಧಾರದ ಮೇಲೆ ಇಲಾಖೆಯ ಮಾರ್ಗಸೂಚಿಯ ಅನ್ವಯ ಶೇಕಡಾವಾರು ಸಹಾಯಧನ ವಿತರಿಸಲಾಗುವುದು. ಅರ್ಜಿಯನ್ನು ಸಲ್ಲಿಸಲು ಜುಲೈ 5 ಕೊನೆಯ ದಿನಾಂಕವಾಗಿದೆ ಎಂದು ಯಲಬುರ್ಗಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article