ಅರ್ಹ ಅಭ್ಯರ್ಥಿಗಳಿಗೆ ಸೇನಾ ಪೂರ್ವ ಸಿದ್ಧತೆಗಾಗಿ ಉಚಿತ ತರಬೇತಿ: ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

Free training for military preparation for eligible candidates: Applications invited

ಅರ್ಹ ಅಭ್ಯರ್ಥಿಗಳಿಗೆ ಸೇನಾ ಪೂರ್ವ ಸಿದ್ಧತೆಗಾಗಿ ಉಚಿತ ತರಬೇತಿ: ಅರ್ಜಿ ಆಹ್ವಾನ

ಜಾಹೀರಾತು

ಕೊಪ್ಪಳ ಜೂನ್ 24, (ಕರ್ನಾಟಕ ವಾರ್ತೆ): ಭಾರತೀಯ ಸೇನೆ/ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27 ನೇ ಸಾಲಿನಲ್ಲಿ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ರೂ.2.50 ಲಕ್ಷ ಹಾಗೂ ಪ್ರವರ್ಗ- 2(ಎ) 3(ಎ) ಹಾಗೂ 3(ಬಿ) ಗಳಿಗೆ ರೂ.1 ಲಕ್ಷ ಇರುತ್ತವೆ, ಅಭ್ಯರ್ಥಿಯು 10 ನೇ ತರಗತಿಯಲ್ಲಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡAತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ 05 ಜುಲೈ 2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 05 ಜುಲೈ 2006 ರಿಂದ 05 ಜುಲೈ 2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.
ಕೊಪ್ಪಳ ಜಿಲ್ಲೆಯ ಕನಕಗಿರಿಯ ಸೇನಾ ಆಯ್ಕೆ ಪೂರ್ವ ತರಬೇತಿ ಕೇಂದ್ರದಲ್ಲಿ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು. ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿ ಪಡೆದು ಜುಲೈ 05 ರೊಳಗಾಗಿ ಜಿಲ್ಲಾ ಕಚೇರಿಯಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು  https://bcwd.karnataka.gov.in/     ಇಂದ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 08539-221606 (ಕಚೇರಿ ಸಮಯ ಬೆಳಿಗ್ಗೆ 10:30 ರಿಂದ ಸಂಜೆ 5.30 ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article