
Former Minister K.N. Rajanna inaugurated the administrative office of Global City Credit Co-operative Society Ltd. on June 29.

ಜೂ 29 ರಂದು ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಡಳಿತ ಕಚೇರಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಚಾಲನೆ

ಬೆಂಗಳೂರು,ಜೂ.29: ಬನಶಂಕರಿ, ಶ್ರೀನಿವಾಸ ನಗರದ ಕನಕಾ ಕಾಂಪ್ಲೆಕ್ಸ್ ನಲ್ಲಿ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ನೂತನ ಆಡಳಿತ ಕಚೇರಿಯನ್ನು ಜೂನ್ 29 ರಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ಉದ್ಘಾಟಿಸಲಿದ್ದಾರೆ.
ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಪ್ರಮುಖ ಸಹಕಾರಿ ಬ್ಯಾಂಕ್ ಆಗಿದ್ದು, ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ಇದೀಗ ಬ್ಯಾಂಕ್ ನ ನೂತನ ಆಡಳಿತ ಕಚೇರಿಯನ್ನು ನಿರ್ಮಿಸಿ ತನ್ನ ಚಟುವಟಿಕೆಯನ್ನು ವಿಸ್ತರಿಸಲಾಗಿದೆ.
ಬಸವನಗುಡಿ ಶಾಸಕರಾದ ರವಿಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯರಾದ ಡಾ. ಟಿ.ಎ. ಶರವಣ, ಯು.ಬಿ. ವೆಂಕಟೇಶ್, ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ ಅಧ್ಯಕ್ಷರಾದ ಸಹಕಾರ ರತ್ನ ಡಾ ಬಿ.ಎಂ ಉಮೇಶ್ ಕುಮಾರ್, ಸಹಕಾರ ಇಲಾಖೆ ನಿ. ಪ್ರಧಾನ ಕಾರ್ಯದರ್ಶಿ ಡಾ. ಸಿ. ಸೋಮಶೇಖರ, ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕರಾದ ಎಚ್. ಬಾಲಶೇಖರ್, ಜೆ.ಡಿ.ಎಸ್. ಹಿರಿಯ ಮುಖಂಡ ಬಾಗೇಗೌಡ, ಅರಮನೆ ಶಂಕರ್, ಬಿ.ಬಿ.ಎಂ.ಪಿ ಮಾಜಿ ಸದಸ್ಯರಾದ ತಿಮ್ಮೇಗೌಡ, ಸಂಗಾತಿ ವೆಂಕಟೇಶ್ ಮತ್ತಿತರರು ಭಾಗವಹಿಸಲಿದ್ದಾರೆ.
