Appeal to use Tungabhadra river water only for drinking purposes.
ತುಂಗಭದ್ರಾ ನದಿ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಮನವಿ
ಕೊಪ್ಪಳ ಜುಲೈ 02, (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ.
ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.
ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುನಿರಾಬಾದ್‌ನ ಕನೀನಿನಿ, ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಸ್.ಬಿ.ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


