No Food Court at Gangavathi Government Pre-University College Grounds:
Founder-President of the All-Round Development Struggle Committee Demandsಗಂಗಾವತಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫುಡ್ ಕೋರ್ಟ್ ಬೇಡ:
ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷರು ಆಗ್ರಹ

ಗಂಗಾವತಿ, ಜು. 6: ಗಂಗಾವತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಫುಡ್ ಕೋರ್ಟ್ ನಿರ್ಮಿಸಲು ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಮ್ಯಾಗಳ ಮನಿ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನವು ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳು, ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸಾಮಾಜಿಕ-ಸಾಂಸ್ಕೃತಿಕ

ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿರುವ ಪ್ರಮುಖ ಸ್ಥಳವಾಗಿದೆ. ಇಂತಹ ಮೈದಾನದಲ್ಲಿ ಫುಡ್ ಕೋರ್ಟ್ ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಆಟದ ಮೈದಾನದ ಕೊರತೆ ಉಂಟಾಗಲಿದ್ದು, ಶಿಕ್ಷಣ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ತೊಂದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸುವುದು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳ ಜವಾಬ್ದಾರಿಯಾಗಿದೆ. ಆದ್ದರಿಂದ ಕಾಲೇಜು ಮೈದಾನವನ್ನು ಉಳಿಸಿ, ಫುಡ್ ಕೋರ್ಟ್ ನಿರ್ಮಾಣದ ಯೋಜನೆಯನ್ನು ಕೈಬಿಡಬೇಕು.ಬೀದಿ ಬದಿ ವ್ಯಾಪಾರಿಗಳು ಕಷ್ಟದಲ್ಲಿ ದ್ದಾರೆ ಅವರ ಕುಟುಂಬಗಳ ಜೀವನ ನಿರ್ವಹಣೆಗೆ ಅಗತ್ಯವಿದ್ದರೆ ನಗರದಲ್ಲಿರುವ ಹಳೇ ಪ್ರವಾಸ ಮಂದಿರ, ಹಳೇ ತಹಶೀಲ್ದಾರ್ ಕಚೇರಿ, ನಗರ ಸಭೆ ಕಂಪೌಂಡ್ ಬಳಿ, ಬಸ್ ನಿಲ್ದಾಣದ ಫುಟ್ ಬಾತ್ ನಲ್ಲಿ ಚಿಕ್ಕ ಚಿಕ್ಕ ಶೆಡ್ ಹಾಕುವದು ಈ ಸ್ಥಳಗಳಲ್ಲಿ ಯಾಯುದಾದರೂ ಸೂಕ್ತ ಪರ್ಯಾಯ ಸ್ಥಳವನ್ನು ಗುರುತಿಸಿ ಫುಡ್ ಕೋರ್ಟ್ ನಿರ್ಮಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಕುರಿತು ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಮ್ಯಾಗಳ ಮನಿ ಹಾಗೂ ಜಡಿಯಪ್ಪ ಹಂಚಿನಾಳ ತಾಲೂಕ ಅಧ್ಯಕ್ಷರು, ಆರ್ ರಾಮಣ್ಣ ರುದ್ರಾಕ್ಷಿ, ಮಂಜುನಾಥ ಚನ್ನ ದಾಸರ, ಪಂಪಾಪತಿ ಹೊಸಳ್ಳಿ ಹಾಗೂ ಸದಸ್ಯರು ಒತ್ತಾಯಿಸಿದ್ದಾರೆ


