Applications invited for Padma series awardsಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಜುಲೈ 07 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2027ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಮಹಿಳಾ ಸಾಧಕರು, ಸಾಮಾಜಿಕ ಕಾರ್ಯಕರ್ತರು, ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ, ಪೋಷಣೆ, ಮಹಿಳೆಯರ ಮೇಲಿನ ಅಪರಾಧಗಳ ತಡೆಗಟ್ಟುವಿಕೆ, ಹೆಣ್ಣು ಮಕ್ಕಳ ರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಸಂಬಂಧಿತ ವಲಯಗಳಿಗೆ ಕೊಡುಗೆ ನೀಡಿರುವವರನ್ನು ಗುರುತಿಸಿ ಅಂತಹ ಮಹಿಳೆಯರ ಹೆಸರುಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶಿಫಾರಸ್ಸು ಮಾಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದಂತಹ ಕೊಪ್ಪಳ ಜಿಲ್ಲೆಯ ಅರ್ಹ ಮಹಿಳೆಯರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಇಲ್ಲಿ ಅರ್ಜಿಗಳನ್ನು ಪಡೆದು ಜುಲೈ 9ರ (ಕಛೇರಿ ಅವಧಿಯೊಳಗೆ) ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಅಥವಾ ದೂರವಾಣಿ ಸಂ: 08539-230121 ಗೆ ಸಂಪರ್ಕಿಸುವಂತೆ ಇಲಾಖಾ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.

