Gangavathi: Pampanna Nayaka has submitted a memorandum to the Deputy Commissioner strongly opposing the proposal to demolish the open-air theatre at the Junior College sports ground and construct a food court in its place.
ಗಂಗಾವತಿ: ಜೂನಿಯರ್ ಕಾಲೇಜ್ಕ್ರೀಡಾ ಮೈದಾನದ ಬಯಲು ರಂಗಮಂದಿರ ತೆರವುಗೊಳಿಸಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಪಂಪಣ್ಣ ನಾಯಕ ತೀವ್ರವಿರೋಧಿಸಿ ಜಿಲ್ಲಾಧಿಕಾರಿಗಳಿಗೆಮನವಿ

ಕೊಪ್ಪಳ, ಜುಲೈ 7: ನಗರದ ಜೂನಿಯರ್ ಕಾಲೇಜ್ ಕ್ರೀಡಾ ಮೈದಾನದಲ್ಲಿರುವ ಬಯಲು ರಂಗಮಂದಿರವನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಫುಡ್ ಸ್ಟ್ರೀಟ್ ನಿರ್ಮಿಸಲು ನಗರಸಭೆ ಕೈಗೊಂಡಿರುವ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಂಪಣ್ಣ ನಾಯಕ ಅವರು ಈ ಕುರಿತು ಮಾನ್ಯ ಜಿಲ್ಲಾಧಿಕಾರಿ, ಕೊಪ್ಪಳ ಅವರಿಗೆ ಮನವಿ ಸಲ್ಲಿಸಿ, ಬಯಲು ರಂಗಮಂದಿರವನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು ಎಂದು ಒತ್ತಾಯಿಸಿದರು.
ಮನವಿಯಲ್ಲಿ, ಗಂಗಾವತಿ ಕ್ರೀಡಾ ಮೈದಾನದಲ್ಲಿರುವ ಬಯಲು ರಂಗಮಂದಿರವು ಹಲವು ವರ್ಷಗಳಿಂದ ಸಾಂಸ್ಕೃತಿಕ, ಸಾಹಿತ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರಮುಖ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿದ್ದು, ಅದನ್ನು ತೆರವುಗೊಳಿಸುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಆ ಸ್ಥಳದಲ್ಲಿ ಫುಡ್ ಸ್ಟ್ರೀಟ್ ನಿರ್ಮಿಸಿದರೆ ರಾತ್ರಿ ವೇಳೆ ಜನಸಂದಣಿ ಹೆಚ್ಚಾಗಿ, ಕೆಲವರು ಮದ್ಯಪಾನ ಹಾಗೂ ಇತರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಅವಕಾಶವಾಗುವ ಸಾಧ್ಯತೆ ಇದೆ. ಇದರಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಸಮೀಪದಲ್ಲಿರುವ ಬಾಲಕಿಯರ ಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರಿಗೆ ತೊಂದರೆ ಮತ್ತು ಅಸುರಕ್ಷಿತ ವಾತಾವರಣ ನಿರ್ಮಾಣವಾಗುವ ಆತಂಕವಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಆದ್ದರಿಂದ, ಬಯಲು ರಂಗಮಂದಿರವನ್ನು ಸಂರಕ್ಷಿಸಿ, ಫುಡ್ ಸ್ಟ್ರೀಟ್ ನಿರ್ಮಾಣದ ಪ್ರಸ್ತಾವನೆಯನ್ನು ತಕ್ಷಣವೇ ಕೈಬಿಡುವಂತೆ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಈ ವಿಷಯದಲ್ಲಿ ಜಿಲ್ಲಾಡಳಿತವು ಶೀಘ್ರ ಕ್ರಮ ಕೈಗೊಂಡು ಸಾರ್ವಜನಿಕರ ಭಾವನೆಗಳಿಗೆ ಗೌರವ ನೀಡಬೇಕು ಎಂದು “ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅದ್ಯಕ್ಷರಾದ ಪಂಪಣ್ಣ ನಾಯಕ, ಶಂಕರ ಪೂಜಾರಿ, ಮುತ್ತಣ್ಣ ಈಳಿಗೇರ, ಹಸೇನ್ಸಾಬ, ಶರಣು ನಾಯಕ, ಪುಂಡಲಿಕ್, ಪುನಿತ್ ಪ�ಪತ್ರಿಕಾ ಪ್ರಕಟಣೆ
ಗಂಗಾವತಿ ಕ್ರೀಡಾ ಮೈದಾನದ ಬಯಲು ರಂಗಮಂದಿರ ತೆರವುಗೊಳಿಸಿ ಫುಡ್ ಸ್ಟ್ರೀಟ್ ನಿರ್ಮಾಣಕ್ಕೆ ಕರವೇ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ತೀವ್ರ ವಿರೋಧ.
ಕೊಪ್ಪಳ, ಜುಲೈ 7:
ಗಂಗಾವತಿ ನಗರದ ಕ್ರೀಡಾ ಮೈದಾನದಲ್ಲಿರುವ ಬಯಲು ರಂಗಮಂದಿರವನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಫುಡ್ ಸ್ಟ್ರೀಟ್ ನಿರ್ಮಿಸಲು ನಗರಸಭೆ ಕೈಗೊಂಡಿರುವ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಶ್ರೀ ಪಂಪಣ್ಣ ನಾಯಕ ಅವರು ಈ ಕುರಿತು ಮಾನ್ಯ ಜಿಲ್ಲಾಧಿಕಾರಿಗಳು, ಕೊಪ್ಪಳ ಅವರಿಗೆ ಮನವಿ ಸಲ್ಲಿಸಿ, ಬಯಲು ರಂಗಮಂದಿರವನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು ಎಂದು ಒತ್ತಾಯಿಸಿದರು.
ಮನವಿಯಲ್ಲಿ, ಗಂಗಾವತಿ ಕ್ರೀಡಾ ಮೈದಾನದಲ್ಲಿರುವ ಬಯಲು ರಂಗಮಂದಿರವು ಹಲವು ವರ್ಷಗಳಿಂದ ಸಾಂಸ್ಕೃತಿಕ, ಸಾಹಿತ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರಮುಖ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿದ್ದು, ಅದನ್ನು ತೆರವುಗೊಳಿಸುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಆ ಸ್ಥಳದಲ್ಲಿ ಫುಡ್ ಸ್ಟ್ರೀಟ್ ನಿರ್ಮಿಸಿದರೆ ರಾತ್ರಿ ವೇಳೆ ಜನಸಂದಣಿ ಹೆಚ್ಚಾಗಿ, ಕೆಲವರು ಮದ್ಯಪಾನ ಹಾಗೂ ಇತರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಅವಕಾಶವಾಗುವ ಸಾಧ್ಯತೆ ಇದೆ. ಇದರಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಸಮೀಪದಲ್ಲಿರುವ ಬಾಲಕಿಯರ ಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರಿಗೆ ತೊಂದರೆ ಮತ್ತು ಅಸುರಕ್ಷಿತ ವಾತಾವರಣ ನಿರ್ಮಾಣವಾಗುವ ಆತಂಕವಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಆದ್ದರಿಂದ, ಬಯಲು ರಂಗಮಂದಿರವನ್ನು ಸಂರಕ್ಷಿಸಿ, ಫುಡ್ ಸ್ಟ್ರೀಟ್ ನಿರ್ಮಾಣದ ಪ್ರಸ್ತಾವನೆಯನ್ನು ತಕ್ಷಣವೇ ಕೈಬಿಡುವಂತೆ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಈ ವಿಷಯದಲ್ಲಿ ಜಿಲ್ಲಾಡಳಿತವು ಶೀಘ್ರ ಕ್ರಮ ಕೈಗೊಂಡು ಸಾರ್ವಜನಿಕರ ಭಾವನೆಗಳಿಗೆ ಗೌರವ ನೀಡಬೇಕು ಎಂದು “ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅದ್ಯಕ್ಷರಾದ ಪಂಪಣ್ಣ ನಾಯಕ, ಶಂಕರ ಪೂಜಾರಿ, ಮುತ್ತಣ್ಣ ಈಳಿಗೇರ, ಹಸೇನ್ಸಾಬ, ಶರಣು ನಾಯಕ, ಪುಂಡಲಿಕ್, ಪುನಿತ್ ಪೂಜಾರಿ, ಅಂಜಿನಪ್ಪ, ಉಮೇಶ ಬಂಡಿ, ಬಾಷಾಸಾಬ, ಕೃಷ್ಣ, ಇನ್ನೂ ಮುಂತಾದ ಕರವೇ ಕಾರ್ಯಕರ್ತರು ಭಾಗವಹಿಸಿ ಆಗ್ರಹಿಸಿದೆ.