ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ

H.Mallikarjun
H.Mallikarjun - Kalyanasiri
1 Min Read
ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ

ಕೊಪ್ಪಳ ಜುಲೈ 10, (ಕರ್ನಾಟಕ ವಾರ್ತೆ): ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂಸ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ.
ಈ ವರ್ಷದ ಘೋಷವಾಕ್ಯ “18 ವರ್ಷ ವಯಸ್ಸಿನ ಮೇಲ್ಪಟ್ಟ ಮದುವೆ ಮತ್ತು ಮಕ್ಕಳ ನಡುವೆ ಕನಿಷ್ಠ 3 ವರ್ಷಗಳ ಅಂತರ ಕಾಪಾಡುವುದುರಿಂದ ತಾಯಿ ಮತ್ತು ಮಕ್ಕಳ ಆರೋಗ್ಯ ವೃದ್ಧಿಸುವುದರೊಂದಿಗೆ ಅನಗತ್ಯ ಗರ್ಭಧಾರಣೆಗಳನ್ನು ತಡೆಗಟ್ಟಬಹುದು” ಎಂಬುದಾಗಿದೆ. ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಚಿಕ್ಕ ಕುಟುಂಬದ ಪರಿಕಲ್ಪನೆ, ಭ್ರೂಣಲಿಂಗಪತ್ತೆಯ ಕಾನೂನು, ತಾತ್ಕಾಲಿಕ ಗರ್ಭನಿರೋಧಕ ವಿಧಾನಗಳು, ಮುಂತಾದವುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
Total Views: 1
Share This Article