ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಳೆ ಸ್ವಾಗತ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ಗಂಗಾವತಿ: ಇಲ್ಲಿನ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 11.07.2026ರ ಶನಿವಾರ ಬೆಳಿಗ್ಗೆ 10.00 ಗಂಟೆಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಜೊತೆಗೆ, 10ನೇ ತರಗತಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದು ನಮ್ಮ ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಪ್ರವೇಶ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಈ ವಿಶೇಷ ಸಮಾರಂಭಕ್ಕೆ ಪತ್ರಿಕಾ ಮಾಧ್ಯಮದ ಮಿತ್ರರು ಆಗಮಿಸಿ, ಕಾರ್ಯಕ್ರಮದ ವರದಿ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಬಸಪ್ಪನಾಗೋಲಿ ಅವರು ಕೋರಿದ್ದಾರೆ.

