ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read

Applications invited for photography and videography training.




ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ಜಾಹೀರಾತು


ಕೊಪ್ಪಳ ಜುಲೈ 21 (ಕರ್ನಾಟಕ ವಾರ್ತೆ): ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಹಳಿಯಾಳ ಸಂಸ್ಥೆ ವತಿಯಿಂದ ಗ್ರಾಮಿಣ ಭಾಗದ ಆಸಕ್ತ ಅಭ್ಯರ್ಥಿಗಳಿಗಾಗಿ 31 ದಿನಗಳ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
 ಸಪ್ಟೆಂಬರ್ ತಿಂಗಳಿನಲ್ಲಿ ಪ್ರಾರಂಭವಾಗುವ ಈ ತರಬೇತಿಯಲ್ಲಿ 18 ರಿಂದ 50 ವರ್ಷದೊಳಗಿನ ಗ್ರಾಮಿಣ ಭಾಗದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು. ತರಬೇತಿ ಪಡೆದ ನಂತರ ಸ್ವಯಂ ಉದ್ಯೋಗ ಆರಂಭಿಸಲು ಅನೂಕುಲವಾಗಿದೆ. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು.
 ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದನ್ನು ಫೋಟೋ ತೆಗೆದು 9483485489 ಅಥವಾ 8970145354 ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಕರೆ ಮಾಡಿ ಹೆಸರು ನೋಂದಾಯಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಹಳಿಯಾಳ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article