ತಿಪಟೂರಿನಲ್ಲಿ ಕಾಂಗ್ರೆಸ್ ಆಕ್ರೋಶ:

Congress Outrage in Tiptur:

ತಿಪಟೂರು :ರಾಹುಲ್ ಗಾಂಧಿ ವಶಕ್ಕೆ ಪಡೆದ ಕ್ರಮ ಖಂಡಿಸಿ ಸಿ.ಬಿ. ಶಶಿಧರ್ (ಟೂಡಾ) ನೇತೃತ್ವದಲ್ಲಿ ಪ್ರತಿಭಟನೆ!
ನೀಟ್ (NEET) ಪರೀಕ್ಷಾ ಅಕ್ರಮದ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಆಗ್ರಹಿಸಿ ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಕ್ರಮವನ್ನು ಖಂಡಿಸಿ ತಿಪಟೂರಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.
ಜನಸ್ಪಂದನ ಟ್ರಸ್ಟ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಸಿ. ಬಿ. ಶಶಿಧರ್ (ಟೂಡಾ)ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಸಿ. ಬಿ. ಶಶಿಧರ್
ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನ ನಮಗೆ ನೀಡಿರುವ ಮೂಲಭೂತ ಹಕ್ಕು. ನೀಟ್ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಇಂದು ಬೀದಿಗೆ ಬಿದ್ದಿದ್ದಾರೆ. ಈ ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ಪರವಾಗಿ ಸಂಸತ್ತಿನಲ್ಲಿ ಸಮಗ್ರ ಚರ್ಚೆಗೆ ಅವಕಾಶ ಕೋರಿದರೆ, ಪ್ರತಿಭಟನಾಕಾರರನ್ನು ಬಂಧಿಸುವುದು ಪ್ರಜಾಪ್ರಭುತ್ವದ ನೇರ ಕೊಲೆ” ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರವು ಪ್ರಶ್ನೆ ಕೇಳುವ ಧ್ವನಿಯನ್ನು ಹತ್ತಿಕ್ಕಲು ಅಸಹಿಷ್ಣು ಧೋರಣೆ ತೋರುತ್ತಿದೆ ಎಂದು ಆರೋಪಿಸಿದರು. ವಶಕ್ಕೆ ಪಡೆದಿರುವ ರಾಹುಲ್ ಗಾಂಧಿ ಹಾಗೂ ಎಲ್ಲಾ ನಾಯಕರನ್ನು ತಕ್ಷಣವೇ ನಿಶ್ಷರತ್ತಾಗಿ ಬಿಡುಗಡೆ ಮಾಡಬೇಕು ಮತ್ತು ಸಂಸತ್ತಿನಲ್ಲಿ ನೀಟ್ ಅಕ್ರಮದ ಕುರಿತು ಪಾರದರ್ಶಕ ಚರ್ಚೆ ನಡೆಸಿ ದೇಶದ ಜನತೆಗೆ ಸತ್ಯಾಂಶ ತಿಳಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ವಿದ್ಯಾರ್ಥಿಗಳ ನ್ಯಾಯಯುತ ಹೋರಾಟದ ಪರವಾಗಿ ಕಾಂಗ್ರೆಸ್ ಪಕ್ಷ ಕೊನೆಯವರೆಗೂ ದೃಢವಾಗಿ ನಿಲ್ಲಲಿದೆ ಎಂದು ಎಚ್ಚರಿಸಿದರು.
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಚರ್ಚೆ ಮಾಡಲು ಹೆದರಿ ಓಡಿಹೋಗುತ್ತಿದೆ. ನಾಯಕರನ್ನು ವಶಕ್ಕೆ ಪಡೆಯುವ ಮೂಲಕ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ನೀಟ್ ಅಕ್ರಮದ ಬಗ್ಗೆ ಸೂಕ್ತ ಉತ್ತರ ಸಿಗುವವರೆಗೂ ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟದಿಂದ ವಿಶ್ರಮಿಸುವುದಿಲ್ಲ ಎಂದು ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಘರ್ಜಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಚನ್ನಬಸವಣ್ಣ, ಬೆಲೆ ಕಾವಲು ಸಮಿತಿ ಅಧ್ಯಕ್ಷರಾದ ಶ್ರೀಕಾಂತ್, ಕಸಾಪ ಅಧ್ಯಕ್ಷರಾದ ಬಸವರಾಜು, ಪ್ರಮುಖ ಮುಖಂಡರಾದ ಅಲ್ಲಾ ಬಕಾಶ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
