ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಣ್ಣ ಕುಟುಂಬದ ಪರಿಕಲ್ಪನೆ ಅಳವಡಿಸಿಕೊಳ್ಳಿ: ಡಾ. ಈಶ್ವರ ಎಸ್. ಸವಡಿ”

H.Mallikarjun
H.Mallikarjun - Kalyanasiri
2 Min Read

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಣ್ಣ ಕುಟುಂಬದ ಪರಿಕಲ್ಪನೆ ಅಳವಡಿಸಿಕೊಳ್ಳಿ: ಡಾ. ಈಶ್ವರ ಎಸ್. ಸವಡಿ”

ಜಾಹೀರಾತು

 

Adopt the small family concept for building a healthy society: Dr. Eshwar S. Savadi

 

ಗಂಗಾವತಿ, : ಸಂಗಾಪುರ ಗ್ರಾಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಸಂಗಾಪುರ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಈಶ್ವರ ಎಸ್. ಸವಡಿ ಅವರು ಉದ್ಘಾಟಿಸಿ ಮಾತನಾಡಿ, ವಿಶ್ವ ಜನಸಂಖ್ಯಾ ದಿನದ ಆಚರಣೆಯ ಉದ್ದೇಶ ಜನರಲ್ಲಿ ಆರೋಗ್ಯಕರ ಕುಟುಂಬ, ತಾಯಿ-ಮಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಜನಸಂಖ್ಯೆಯ ಹೆಚ್ಚಳಕ್ಕೆ ಅನುಗುಣವಾಗಿ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡವೂ ಹೆಚ್ಚಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕುಟುಂಬ ಯೋಜನೆ ಕುರಿತು ಅರಿವು ಹೊಂದಿ, ಸರ್ಕಾರದ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಣ್ಣ ಕುಟುಂಬ, ಸುಖೀ ಕುಟುಂಬ ಎಂಬ ಪರಿಕಲ್ಪನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಗರ್ಭಿಣಿಯರ ಆರೈಕೆ, ತಾಯಿ-ಮಗು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸೇವೆಗಳನ್ನು ಆರೋಗ್ಯ ಇಲಾಖೆಯ ಮೂಲಕ ಉಚಿತವಾಗಿ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಿಬ್ಬಂದಿ ಜನಜಾಗೃತಿ ಮೂಡಿಸುವಲ್ಲಿ ಹೆಚ್ಚಿನ ಶ್ರಮ ವಹಿಸಬೇಕು ಎಂದು ಕರೆ ನೀಡಿದರು.

ನಂತರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ರವೀಂದ್ರನಾಥ್ ಅವರು ಮಾತನಾಡಿ, ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ದುಷ್ಪರಿಣಾಮಗಳು, ಕುಟುಂಬ ಕಲ್ಯಾಣ ಯೋಜನೆಗಳ ಮಹತ್ವ ಹಾಗೂ ಸರ್ಕಾರದ ವಿವಿಧ ಕುಟುಂಬ ಕಲ್ಯಾಣ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಮಾಹಿತಿ ನೀಡಿದರು.ನಂತರ ಮಾತನಾಡಿದ

ಈ ಸಂದರ್ಭದಲ್ಲಿ ಡಾ. ಸಂತೋಷ್ ಕುಮಾರ್, ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಶಾ ಬೇಗಂ. ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ದೇವಮ್ಮ,ಪ್ರಸನ್ನ,ಸಂತೋಷ, ವಿಘ್ನೇಶ,ಜಗದೀಶ್, ಮುಖ್ಯೋಪಾಧ್ಯಾಯ ಮೈಲಾರಪ್ಪ,ಪಂಚಾಯತಿ ಕಾರ್ಯದರ್ಶಿ ಶೇಖರಪ್ಪ, ಸಿಬ್ಬಂದಿ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Total Views: 1
Share This Article