ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
2 Min Read

Brahmin Development Board: Inviting applications for Vipra self-employment direct loan scheme

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಕೊಪ್ಪಳ ಜುಲೈ 30 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು 2026-27ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆ ಸೇರಿದಂತೆ ವಿವಿಧ ಸ್ವಯಂ ಉದ್ಯೋಗಗಳನ್ನು ಆರಂಭಿಸಲು ಈ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.
ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಕನಿಷ್ಠ ರೂ. 1 ಲಕ್ಷ ಹಾಗೂ ಗರಿಷ್ಠ ರೂ. 2 ಲಕ್ಷವರೆಗೆ ಸಾಲ-ಸಹಾಯಧನ ನೀಡಲಾಗುತ್ತದೆ. ಘಟಕ ವೆಚ್ಚದ ಶೇ.20ರಷ್ಟು ಸಬ್ಸಿಡಿ ನೀಡಲಾಗಿದ್ದು, ಉಳಿದ ಶೇ.80ರಷ್ಟು ಮೊತ್ತವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ 34 ಕಂತುಗಳಲ್ಲಿ ಮರುಪಾವತಿಸಬೇಕು. ರೂ. 1 ಲಕ್ಷ ಘಟಕ ವೆಚ್ಚಕ್ಕೆ ರೂ. 20 ಸಾವಿರ ಸಬ್ಸಿಡಿ ಹಾಗೂ ರೂ. 80 ಸಾವಿರ ಸಾಲ, ರೂ. 2 ಲಕ್ಷ ಘಟಕ ವೆಚ್ಚಕ್ಕೆ ರೂ. 40 ಸಾವಿರ ಸಬ್ಸಿಡಿ ಹಾಗೂ ರೂ. 1.60 ಲಕ್ಷ ಸಾಲ ನೀಡಲಾಗುತ್ತದೆ.
*ಅರ್ಹತಾ ಮಾನದಂಡಗಳು:* ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ವರ್ಗದ (ಇ.ಡಬ್ಲೂ.ಎಸ್) ಪ್ರಮಾಣಪತ್ರ ಹೊಂದಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65 ವರ್ಷಗಳೊಳಗಿರಬೇಕು. ಒಂದು ಕುಟುಂಬದಿAದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಸಾಲದ ಉದ್ದೇಶವನ್ನು ಆನ್‌ಲೈನ್ ಅರ್ಜಿಯಲ್ಲಿ ಕನಿಷ್ಠ 10 ಪದಗಳಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಇಲ್ಲವಾದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತದೆ. ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಹಾಗೂ ಬ್ಯಾಂಕ್ ಖಾತೆ ಎನ್.ಪಿ.ಸಿ.ಐ ಅಡಿಯಲ್ಲಿ ಸೀಡ್ ಆಗಿರಬೇಕು.
ಯೋಜನೆಯಡಿ ಮಹಿಳೆಯರಿಗೆ 33 ಶೇಕಡಾ ಹಾಗೂ ವಿಶೇಷಚೇತನರಿಗೆ 5 ಶೇಕಡಾ ಮೀಸಲಾತಿ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31ರ ಸಂಜೆ 5.30 ಗಂಟೆಯವರೆಗೆ ಅವಕಾಶವಿದ್ದು, ಅರ್ಜಿಗಳನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧಿಕೃತ ವೆಬ್‌ಸೈಟ್ Ksbdb.karnataka.gov.in ನಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಬಹುದು.
 ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಸಹಾಯವಾಣಿ ಸಂಖ್ಯೆ: 8762249230 ಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಕೌಶಲ್ಯ ಮಿಷನ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗವಿಶಂಕರ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
Share This Article