ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 30 ರವರೆಗೆ 10,38,311 ಗಣತಿ ನಮೂನೆಗಳ ಡಿಜಿಟಲೀಕರಣ

H.Mallikarjun
H.Mallikarjun - Kalyanasiri
1 Min Read

SIR: Digitization of 10,38,311 census samples in Koppal district until July 30

ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 30 ರವರೆಗೆ 10,38,311 ಗಣತಿ ನಮೂನೆಗಳ ಡಿಜಿಟಲೀಕರಣ


ಕೊಪ್ಪಳ ಜುಲೈ 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 30ರ ಸಂಜೆ 06 ಗಂಟೆಯವರೆಗೆ ಒಟ್ಟು 10,38,311 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದAತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬAಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿವರೆಗೆ ಒಟ್ಟು 10,38,311 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
Total Views: 0
Share This Article