State award for excellent service in the senior citizens’ sector: Call for applications
ಹಿರಿಯ ನಾಗರಿಕರ ಕ್ಷೇತ್ರದಲ್ಲಿನ ಉತ್ತಮ ಸೇವೆಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಕೊಪ್ಪಳ ಜುಲೈ 30 (ಕರ್ನಾಟಕ ವಾರ್ತೆ): ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2026ರ ಸಂಬಂಧ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಸಂಸ್ಥೆಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದಿನಾಂಕ: 01-10-2026 ರಂದು ವಿಶ್ವ ಹಿರಿಯ ನಾಗರಿಕರ ದಿನಾಚಾರಣೆಯ ಸಂದರ್ಭದಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಲ್ಲಿ, ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವ್ಯಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾದ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಒಟ್ಟು 07 ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ನೀಡಲಾಗುತ್ತಿದೆ. ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಈ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಂದ ಮತ್ತು ಅರ್ಹ ಸಂಸ್ಥೆಗಳು ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ಆಸಕ್ತ ಹಿರಿಯ ನಾಗರಿಕರು ಅಥವಾ ಸಂಸ್ಥೆಗಳು ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸರ್ಕಾರಿ ನೌಕರರ ಭವನ ಐ.ಬಿ ಎದುರುಗಡೆ ಗೋವಿಂದರಾಯ ದೇವಸ್ಥಾನ ಹಿಂದುಗಡೆ ಕಿನ್ನಾಳ ರಸ್ತೆ ಕೊಪ್ಪಳ ಕಛೇರಿಯಿಂದ ಪಡೆದು ನಿಗದಿತ ನಮೂನೆಯಲ್ಲಿ ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಪ್ರಸ್ತಾವನೆಗಳನ್ನು ದ್ವಿಪ್ರತಿಯಲ್ಲಿ ಆಗಸ್ಟ್ 22ರೊಳಗೆ ಕಛೇರಿ ಅವಧಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-295496 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views:
0