ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read

Jawahar Navodaya Vidyalaya: Invitation to apply for 6th grade entrance exam

ಜಾಹೀರಾತು

ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಕೊಪ್ಪಳ ಆಗಸ್ಟ್ 01 (ಕರ್ನಾಟಕ ವಾರ್ತೆ): ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ 2027-28ರ ಶೈಕ್ಷಣಿಕ ವರ್ಷಕ್ಕಾಗಿ ಪ್ರವೇಶ ಪರೀಕ್ಷೆಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜವಾಹರ ನವೋದಯ ವಿದ್ಯಾಲಯವು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಆನ್‌ಲೈನ್ ವೆಬ್‌ಸೈಟ್ https://cbseitms.rcil.gov.in/nvs ನಲ್ಲಿ ಅರ್ಜಿಗಳನ್ನು ನೀಡಲಾಗಿದ್ದು,ಸುಲಭ ಮತ್ತು ಸರಳ ರೀತಿಯಲ್ಲಿ ವಿದ್ಯಾರ್ಥಿಗಳಿಗೆ,ಪೋಷಕರಿಗೆ ಸಹಾಯವಾಗುವಂತೆ ಇಂಟರ್ನೆಟ್ ಕೇಂದ್ರಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಬಹುದು.
 ಅರ್ಜಿಗಳನ್ನು ಭರ್ತಿ ಮಾಡುವ ವಿದ್ಯಾರ್ಥಿಯು 2026-27ರ ಶೈಕ್ಷಣಿಕ ವರ್ಷದಲ್ಲಿ 5 ನೇ ತರಗತಿಯಲ್ಲಿ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ ಓದುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 7 ರೊಳಗಾಗಿ ಅರ್ಜಿ ಸಲ್ಲಿಸಬಹುದು ಹಾಗೂ ಪ್ರವೇಶ ಪರೀಕ್ಷೆಯು ನವೆಂಬರ್ 28 ರಂದು ನಡೆಯಲಿವೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
Share This Article