ತಮಿಳುನಾಡಿಗೆ ನೀರು ಬೀಡದಂತೆ ಹನೂರ ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ .

Pro-Kannada organizations staged a protest in Hanur town against the release of water to Tamil Nadu.

ವರದಿ: ಬಂಗಾರಪ್ಪ .ಸಿ.
ಹನೂರು: ಕರ್ನಾಟಕದಿಂದ ತಮಿಳುನಾಡಿಗೆ ನೀರು ಬೀಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಏಕ ಪಕ್ಷೀಯವಾಗಿ ಆದೇಶಿಸಿರುವ ಕ್ರಮವನ್ನು ಖಂಡಿಸಿ ಶನಿವಾರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲೂಕು ಘಟಕದಿಂದ ಪ್ರತಿಭಟನೆ ನಡೆಯಿತು.
ಪಟ್ಟಣದ ದಿ. ಹೆಚ್. ನಾಗಪ್ಪ ವೃತ್ತ ದಿಂದ ಡಾ. ಬಿಆರ್ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಕರ್ನಾಟಕ ರಕ್ಷಣಾ ವೇದಿಕೆಯವರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಹಸೀಲ್ದಾರ್ ಕಚೇರಿಗೆ ತೆರಳಿ ಶಿರಸ್ತೆದಾರ್ ರವಿ ರವರಿಗೆ ಮನವಿ ಸಲ್ಲಿಸಿದರು ಮನವಿ ಸ್ವೀಕರಿಸಿ ಮಾತನಾಡಿದ ಶಿರಸ್ದಾರ್ ರವಿ ರವರು ನಿಮ್ಮ ಮನವಿಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಜಿಲ್ಲಾ ಕಾರ್ಯದರ್ಶಿ ಅಮೋಘ ಜಗ್ತಾ ತಪ್ ಮಾತನಾಡಿ ಕಾವೇರಿ ನೀರನ್ನು ತಮಿಳುನಾಡಿಗೆ ಯಾವುದೇ ಕಾರಣಕ್ಕು ಬಿಡಬಾರದು ನಮ್ಮ ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರಿಲ್ಲ ಆದ್ರಿಂದ ಘನ ಸರಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಬಾರದು ಕಾವೇರಿ ಕೊಳ್ಳದ ಭಾಗದಲ್ಲಿ ಮಳೆಯಾಗದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಅಂತರ್ಜಲ ಮಟ್ಟ ಕುಸಿದಿದ್ದು, ಕೃಷಿ ಹಾಗೂ ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗಿದೆ. ಈಗೀರುವಾಗ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿರುವುದು ಎಷ್ಟರ ಮಟ್ಟಿಗೆ ಸರಿ? ಎಂದರು
. ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣ್ಣ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಮೀನ್ ರವರು ಮಾತನಾಡಿ ಈ ಹಿಂದೆ ಇದೇ ರೀತಿ ಸಮಸ್ಯೆ ಎದುರಾಗಿದ್ದ ವೇಳೆ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪ ಅವರು ಕೈಗೊಂಡ ದೃಢ ನಿರ್ಧಾರ ನಿಜಕ್ಕೂ ಮೆಚ್ಚುವಂತದ್ದು. ಆದ್ದರಿಂದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇದೇ ನಿಲುವನ್ನು ತಾಳುವುದರ ಮೂಲಕ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ವೇದಿಕೆಯ ತಾಲೂಕು ಅಧ್ಯಕ್ಷ ನೇಮತ್ ಪಾಷ, ಗೌರವಾಧ್ಯಕ್ಷ ನಟರಾಜಗೌಡ, ಜಿಲ್ಲಾ ಕಾರ್ಯದರ್ಶಿ ರಾಹಿಲ್, ರಾಮಾಪುರ ಘಟಕದ ಅಧ್ಯಕ್ಷ ಅಬ್ದುಲ್ ಮುಸಫ್, ಪದಾಧಿಕಾರಿಗಳಾದ ಶಿವಲಿಂಗ, ಸೈಯದ್ ತಾಜ್ ಹನೂರು ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿಯವರು. ಹಾಗೂ ಸಿಬ್ಬಂದಿಗಳು ಪ್ರತಿಭಟನೆ ವೇಳೆ ಹಾಜರಿದ್ದರು
