ಆಗಸ್ಟ್ 4 ಮತ್ತು 5 ರಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ಜಿಲ್ಲಾ ಪ್ರವಾಸ

H.Mallikarjun
H.Mallikarjun - Kalyanasiri
1 Min Read
District visit by the President of the State Commission for Protection of Child Rights on August 4 and 5

ಆಗಸ್ಟ್ 4 ಮತ್ತು 5 ರಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ಜಿಲ್ಲಾ ಪ್ರವಾಸ


ಕೊಪ್ಪಳ ಆಗಸ್ಟ್ 03, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಸಂತೋಷ ಕುಮಾರ ಮತ್ತು ಸದಸ್ಯರಾದ ಸತ್ಯನಾರಾಯಣ ಶೆಟ್ಟಿರವರು ಆಗಸ್ಟ್ 4 ಮತ್ತು 5 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಆಗಸ್ಟ್ 4 ರಂದು ಸಂಜೆ 6 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆಗಸ್ಟ್ 5 ರಂದು ಜಿಲ್ಲೆಯ ವಸತಿ ನಿಲಯಗಳು, ಅಂಗನವಾಡಿಗಳು, ಶಾಲೆ, ಕಿಮ್ಸ್ ಆಸ್ಪತ್ರೆ, ಪೊಲೀಸ್ ಠಾಣೆ ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.
ಅಧ್ಯಕ್ಷರ ಭೇಟಿಯ ಸಮಯದಲ್ಲಿ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿರಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
Share This Article