ಕುಷ್ಟಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಖಾಲಿ ಇರುವ ಶುಶ್ರೂಷಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read

 

Kushtagi Mother and Child Hospital: Applications invited for vacant nursing officer positions

ಕುಷ್ಟಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಖಾಲಿ ಇರುವ ಶುಶ್ರೂಷಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ ಆಗಸ್ಟ್ 03, (ಕರ್ನಾಟಕ ವಾರ್ತೆ): ಕುಷ್ಟಗಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ 12 ಶುಶ್ರೂಷಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎರಡು ವರ್ಷಗಳ ಸೇವಾ ಅನುಭವ ಇರುವ ಅರ್ಹ ಆಸಕ್ತ ಅಭ್ಯರ್ಥಿಗಳು  www.koppal.nic.in     ಜಿಲ್ಲಾ ವೆಬ್ ಸೈಟ್ ನಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ, ತಿಳಿಸಿರುವ ಸ್ಥಳಗಳಲ್ಲಿ ಸಂಬAಧಿಸಿದ ಅಗತ್ಯ ಮೂಲ ದಾಖಲೆಗಳನ್ನು ಹಾಗೂ ಎರಡು ಸ್ವಯಂ ದೃಢೀಕೃತ ನಕಲು ಪ್ರತಿಗಳೊಂದಿಗೆ ಆಗಸ್ಟ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯೊಳಗಾಗಿ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್ ಅನ್ನು ವೀಕ್ಷಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
Share This Article