ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ವಾತಂತ್ರ‍್ಯೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ
ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಡಾ.ಸುರೇಶ ಇಟ್ನಾಳ ಸೂಚನೆ
Pre-Independence Day preparation meeting under the chairmanship of the District Commissioners
ಕೊಪ್ಪಳ ಆಗಸ್ಟ್ 03 (ಕರ್ನಾಟಕ ವಾರ್ತೆ): ಆಗಷ್ಟ್ 15 ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸೂಚನೆ ನೀಡಿದರು.
80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 3ರಂದು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ 15ರಂದು ಬೆಳಗ್ಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯ ಪಾಲ್ಗೊಳ್ಳಬೇಕು. ಯಾವುದೇ ನಿಯಮಗಳು ಉಲ್ಲಂಘನೆಯಾಗದಂತೆ ಹಾಗೂ ಸರ್ಕಾರದ ಶಿಷ್ಠಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳನ್ನು ಸ್ವಚ್ಛಗೊಳಿಸಬೇಕು. ವಿವಿಧೆಡೆ ದೀಪಾಲಂಕಾರ ಮಾಡಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ವಿವಿಧ ತುಕಡಿಗಳಿಂದ ಪಥ ಸಂಚಲನವು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಸ್ವಾತಂತ್ರ್ಯ ಚಳುವಳಿಗಳನ್ನು ನೆನಪಿಸುವಂತಹ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಭಿನ್ನವಾಗಿ ನಡೆಯಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನಗಳನ್ನು ಕಾಯ್ದಿರಿಸಬೇಕು. ಪಥಸಂಚಲನದಲ್ಲಿ ಪೌರಕಾರ್ಮಿಕರ ಒಂದು ತಂಡವು ಸಹ ಪಾಲ್ಗೊಳ್ಳುವಂತೆ ಕೊಪ್ಪಳ ನಗರಸಭೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಮಾತನಾಡಿ, ಸ್ವಾತಂತ್ರ‍್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಹಾಗೂ ಪಥಸಂಚಲನ ಪೂರ್ವಭಾವಿ ತರಬೇತಿಗೆ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಕೆ.ಕೆ.ಎಸ್.ಆರ್.ಟಿ.ಸಿ ವತಿಯಿಂದ ಬಸ್ ಸೌಕರ್ಯ ಒದಗಿಸಬೇಕು. ಮಕ್ಕಳಿಗೆ ಹಾಲು ಅಥವಾ ಲಘು ಉಪಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ, ಸ್ವಾತಂತ್ರ‍್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಪಥಸಂಚಲನವು ಶಿಸ್ತುಬದ್ಧ ಮತ್ತು ಅಚ್ಚುಕಟ್ಟಾಗಿರಬೇಕು. ಇದಕ್ಕಾಗಿ ನೀಡಲಾಗುವ ಪೂರ್ವಭಾವಿ ತರಬೇತಿಯಲ್ಲಿ ಆಯಾ ತಂಡದ ಮಕ್ಕಳು ಪಾಲ್ಗೊಳ್ಳಬೇಕು. ಪ್ಲಾಸ್ಟಿಕ್ ಧ್ವಜವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಯಾವ ಅಂಗಡಿಗಳಲ್ಲೂ ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಕ್ರಮಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಾರ್ವಜನಿಕರಿಗೂ ಮಾಹಿತಿ ನೀಡಬೇಕು ಎಂದರು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಾತನಾಡಿ, ಸ್ವಾತಂತ್ರ‍್ಯೋತ್ಸವದ ವ್ಯವಸ್ಥಿತ ಆಚರಣೆಗೆ ರಚಿಸಲ್ಪಟ್ಟ ಸಮಿತಿಗಳು ಪರಸ್ಪರ ಸಮನ್ವಯ ಸಾಧಿಸಿ ತಮ್ಮ ಜಾವಾಬ್ದಾರಿಗಳನ್ನು ನಿರ್ವಹಿಸಬೇಕು. ಸೌಲಭ್ಯ ವಿತರಣೆ, ಸಾಧಕರಿಗೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಇದ್ದಲ್ಲಿ ಅಂತಹ ಅಧಿಕಾರಿಗಳು ಮುಂಚಿತವಾಗಿ ಜಿಲ್ಲಾಡಳಿತಕ್ಕೆ ಮತ್ತು ಸಂಬಂಧಪಟ್ಟ ಸಮಿತಿಗೆ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಸೋಮಶೇಖರಗೌಡ ಪಾಟೀಲ್, ಆಹಾರ ಇಲಾಖೆ ಉಪನಿರ್ದೇಶಕರಾದ ವಿಶ್ವನಾಥಗೌಡ ಎಂ.ಎನ್., ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ ಜಾಬಗೌಡರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Total Views:
0