Sir: Digitization of 10,40,297 enumeration samples in Koppal district until August 03
ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಆಗಸ್ಟ್ 03 ರವರೆಗೆ 10,40,297 ಗಣತಿ ನಮೂನೆಗಳ ಡಿಜಿಟಲೀಕರಣ
ಕೊಪ್ಪಳ ಆಗಸ್ಟ್ 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಆಗಸ್ಟ್ 03ರ ಸಂಜೆ 06 ಗಂಟೆಯವರೆಗೆ ಒಟ್ಟು 10,40,297 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿವರೆಗೆ ಒಟ್ಟು 10,40,297 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
Total Views:
0
