Siravara: Applications invited for guest lecturer recruitment
ಸಿರವಾರ: ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
ಕೊಪ್ಪಳ ಆಗಸ್ಟ್ 03 (ಕರ್ನಾಟಕ ವಾರ್ತೆ): ಕನಕಗಿರಿ ತಾಲೂಕಿನ ಸಿರವಾರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ (ಪ.ಪಂ-830)ಯನ್ನು 2026–27ನೇ ಶೈಕ್ಷಣಿಕ ಸಾಲಿನಿಂದ ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲಾಗಿದ್ದು, ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ, ಆಂಗ್ಲ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕಯಂತ್ರ ವಿಜ್ಞಾನ ವಿಷಯಗಳಲ್ಲಿ ತಲಾ ಒಂದು ಹುದ್ದೆ ಖಾಲಿ ಇದೆ. ಕನ್ನಡ ಹಾಗೂ ಆಂಗ್ಲ ವಿಷಯಗಳಿಗೆ ಎಂ.ಎ., ಬಿ.ಎಡ್., ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಎಂ.ಎಸ್‌ಸಿ., ಬಿ.ಎಡ್., ಗಣಕಯಂತ್ರ ವಿಜ್ಞಾನ ವಿಷಯಕ್ಕೆ ಎಂಸಿಎ/ಎಂ.ಟೆಕ್./ಎಂ.ಎಸ್‌ಸಿ., ಬಿ.ಎಡ್. ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತಾ ದಾಖಲೆಗಳೊಂದಿಗೆ ಆಗಸ್ಟ್ 10 ರೊಳಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಪದವಿ ಪೂರ್ವ ವಸತಿ ಕಾಲೇಜು, ಸಿರವಾರ, ತಾ. ಕನಕಗಿರಿ, ಜಿ. ಕೊಪ್ಪಳ ಇಲ್ಲಿಗೆ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಎಂದು ಸಿರವಾರದ ಡಾ. ಬಿ.ಆರ್. ಅಂಬೇಡ್ಕರ್ ಪದವಿ ಪೂರ್ವ ವಸತಿ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views:
0