ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

H.Mallikarjun
H.Mallikarjun - Kalyanasiri
4 Min Read

Take steps to register Bharat Jodo youth groups: District officer Dr. Suresh B. Itnal

ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

ಕೊಪ್ಪಳ ಆಗಸ್ಟ್ 03, (ಕರ್ನಾಟಕ ವಾರ್ತೆ): ಸಶಕ್ತ ಯುವಜನತೆಯನ್ನು ಒಗ್ಗೂಡಿಸಿ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಿ, ಜಾಗೃತ ನಾಗರಿಕರಿಂದ ಕೂಡಿದ ವಿಕಾಸಶೀಲ, ಸೌಹಾರ್ದಯುತ ಮತ್ತು ಬಲಿಷ್ಠ ರಾಷ್ಟç ನಿರ್ಮಾಣಕ್ಕೆ ಶ್ರಮಿಸುವುದು `ಭಾರತ್ ಜೋಡೋ ಯುವ ಸಂಘ’ದ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಆದೇಶದಂತೆ ಕೊಪ್ಪಳ ಜಿಲ್ಲೆಯಲ್ಲಿ 16 ರಿಂದ 35 ವಯೋಮಾನದವರನ್ನು ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಾರತ್ ಜೋಡೋ ಯುವ ಸಂಘದ ಸ್ಥಾಪನೆಗೆ ಸಂಬAಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವಕರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದ್ದು, ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮರಸ್ಯವನ್ನು ಉತ್ಥೇಜಿಸಲು ಗ್ರಾಮ ಪಂಚಾಯತ್ ಮತ್ತು ನಗರ ವಾರ್ಡುಗಳ ವ್ಯಾಪ್ತಿಯಲ್ಲಿ ಅಂದಾಜು 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಬೇಕಿದೆ. ಯುವಜನರನ್ನು ಸಬಲೀಕರಣಗೊಳಿಸಿ ಸಮುದಾಯ ಅಭಿವೃದ್ಧಿ, ಸಾಮಾಜಿಕ ಸ್ವಾಸ್ಥö್ಯ ಮತ್ತು ತಳಮಟ್ಟದ ಆಡಳಿತದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಬೇಕಾಗಿದೆ. ಭಾರತ್ ಜೋಡೋ ಸಂಘದಿAದ ಮುಖ್ಯವಾಗಿ ಗ್ರಾಮೀಣ ನಗರದ ಯುವಜನತೆಯಲ್ಲಿ ಕ್ರೀಡೆ, ಫಿಟ್ನೆಸ್, ಆರೋಗ್ಯಕರ ಜೀವನ ಶೈಲಿ ಮತ್ತು ನಾಯಕತ್ವದ ಅವಕಾಶಗಳಲ್ಲಿನ ಅಡೆತಡೆಗಳನ್ನು ನಿವಾರಿಸಬಹುದಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ಮತ್ತು ನಗರ, ವಾರ್ಡ್ ಒಂದರಲ್ಲಿ ಸಾಂಸ್ಥಿಕ ವೇದಿಕೆ ನಿರ್ಮಿಸಿ ನಾಯಕತ್ವ ಜವಾಬ್ದಾರಿ ಮತ್ತು ನಾಗರಿಕ ಪ್ರಜ್ಞೆಯನ್ನು ಬೆಳೆಸುವುದರ ಜೊತೆಗೆ ಒಂದುಗೂಡಿಸುವ ಉದ್ದೇಶ ಹೊಂದಿದೆ. ಆದ್ದರಿಂದ  ಯುವ ಸಂಘಗಳನ್ನು ಸ್ಥಾಪಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ನೋಂದಣಿ ಆಗುವಂತೆ ಸಂಬAಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಭಾರತ್ ಜೋಡೋ ಯುವ ಸಂಘ ಸ್ಥಾಪಿಸಲು ಜಿಲ್ಲೆಯ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಸಂಘ ಸ್ಥಾಪಿಸಬೇಕು. ಯೋಜನೆಯ ಮಾರ್ಗಸೂಚಿಗಳ ಪ್ರಕಾರ, ಸಂಘದ ಸದಸ್ಯರು ತಾವು ನೋಂದಾಯಿಸಿಕೊಳ್ಳುವ ಗ್ರಾಮ ಪಂಚಾಯಿತಿ ಅಥವಾ ವಾರ್ಡ್ನ ಸಾಮಾನ್ಯ ನಿವಾಸಿ ಆಗಿರಬೇಕು. ಪ್ರತಿಯೊಬ್ಬ ಸದಸ್ಯರು ಒಂದು ಸಂಘಕ್ಕೆ ಮಾತ್ರ ಸದಸ್ಯರಾಗಲು ಅವಕಾಶವಿದ್ದು, ಸಂಘದ ಸದಸ್ಯರು ತಮ್ಮೊಳಗಿಂದಲೇ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗಸ್ಟ್ 6ರಂದು ಮಾನ್ಯ ಉಪ ಮುಖ್ಯಮಂತ್ರಿಗಳು ಬಿಜೆವೈಎಸ್ ಮೊಬೈಲ್ ಆಪ್ ಹಾಗೂ ವೆಬ್‌ಸೈಟ್ ಅನ್ನು ಉದ್ಘಾಟಿಸಲಿದ್ದು, ಆಗಸ್ಟ್ ಎರಡನೇ ವಾರದಲ್ಲಿ ಮಾನ್ಯ ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಭಾರತ್ ಜೋಡೋ ಯುವ ಸಂಘಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ನಂತರ ನೋಂದಣಿ ಪೂರ್ಣಗೊಂಡ ಬಳಿಕ ಪ್ರತಿಯೊಬ್ಬ ಸದಸ್ಯರಿಗೂ ಯೂನಿಕ್ ಐಡಿ ಕಾರ್ಡ್ ನೀಡಲಾಗುತ್ತದೆ ಎಂದು ಅವರು ಹೇಳಿದರು.
ಪ್ರತಿ ಸಂಘಕ್ಕೆ ಸರ್ಕಾರದಿಂದ ಒಬ್ಬ ಮಾರ್ಗದರ್ಶಕರನ್ನು (ಮೆಂಟರ್) ನೇಮಕ ಮಾಡಲಾಗುತ್ತದೆ. ಅಲ್ಲದೆ, ನೋಂದಾಯಿತ ಸಂಘಗಳಿಗೆ ವಿವಿಧ ಹಂತಗಳಲ್ಲಿ ಒಟ್ಟು ರೂ.10 ಲಕ್ಷದವರೆಗೆ ಅನುದಾನ ನೀಡಲಾಗುವುದು.  ಗ್ರಾಮ ಪಂಚಾಯತಿಗೆ ಒಂದು ಸಂಘ, ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ 4,000 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪುರಸಭೆ ವ್ಯಾಪ್ತಿಯಲ್ಲಿ 6,000 ಜನಸಂಖ್ಯೆಗೆ ಒಂದು ಸಂಘ, ನಗರಸಭೆ ವ್ಯಾಪ್ತಿಯಲ್ಲಿ 8,000 ಜನಸಂಖ್ಯೆಗೆ ಒಂದು ಸಂಘದAತೆ ಜಿಲ್ಲೆಯಲ್ಲಿ ಒಟ್ಟು 214 ಸಂಘಗಳು ಸ್ಥಾಪಿಸಬೇಕು. ಸಮಿತಿ ರಚನೆ ಮಾಡುವಲ್ಲಿ ಪ್ರತಿ ಸಮಿತಿಗೆ ಒಬ್ಬರು ಮಹಿಳೆಯರು ಕಡ್ಡಾಯವಾಗಿ ಇರಬೇಕು ಹಾಗೂ ಸಂಘದ ಕಾರ್ಯಕಾರಿ ಸಮಿತಿಯು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳನ್ನು ಸಮವಾಗಿ ಪ್ರತಿನಿಧಿಸುವುದು ಹಾಗೂ ಪ್ರತಿ ಭಾರತ್ ಜೋಡೋ ಯುವ ಸಂಘದ ಪಾದಾಧಿಕಾರಿಗಳಲ್ಲಿ ಮತ್ತು ಅದರ ಸದಸ್ಯರಲ್ಲಿ ಆಯಾ ವ್ಯಾಪ್ತಿಯಲ್ಲಿ ವಾಸವಿರುವ ಎಲ್ಲಾ ಜಾತಿಯವರನ್ನು ಕಡ್ಡಾಯವಾಗಿ ಒಳಗೊಂಡಿರಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಂಘದ ಕುರಿತು ವಿಷಯಗಳನ್ನು ಚರ್ಚಿಸಲು ಆಯಾ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಥಳಾವಕಾಶ ಇರುತ್ತದೆ. ನಗರ ಪ್ರದೇಶದಲ್ಲಿ ಸ್ಥಳೀಯ ಶಾಲೆ, ಕಾಲೇಜು, ಸಮುದಾಯ ಭವನ ಅಥವಾ ಯಾವುದಾದರೂ ಸರ್ಕಾರಿ ಕಟ್ಟಡದಲ್ಲಿ ಸೂಕ್ತ ವಿಸ್ತೀರ್ಣದ ಒಂದು ಕೊಠಡಿಯನ್ನು ಒದಗಿಸಲು ಅಧಿಕಾರಿಗಳಿಗೆ ತಿಳಿಸಿದರು.
ನೋಂದಾಯಿತ ಸಂಘವು ವಿಪತ್ತು ನಿರ್ವಹಣೆ ಮತ್ತು ಪರಿಹಾರ, ಜಲ ಸಂರಕ್ಷಣೆ ಚಟುವಟಿಕೆಗಳು, ತ್ಯಾಜ್ಯ ನಿರ್ವಹಣೆ ಉಪಕ್ರಮಗಳು, ಗ್ರಾಹಕ ಜಾಗೃತಿ ಅಭಿಯಾನಗಳು, ಸೈಬರ್ ಸುರಕ್ಷತೆ ಜಾಗೃತಿ, ಸಂಚಾರ ಜಾಗೃತಿ ಅಭಿಯಾನಗಳು, ಕೃಷಿ ಮತ್ತು ಗ್ರಾಮೀಣ ನಾವೀನ್ಯತೆ ಇತ್ಯಾದಿ ಸಮುದಾಯ ಫಲಾನುಭವಿ ಕಾರ್ಯಕ್ರಮಗಳು, ಧೂಮಪಾನ, ಮದ್ಯಪಾನ. ಡ್ರಗ್ಸ್ ವಿರುದ್ಧ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಪ್ರತಿಯೊಂದು ಸಂಘವು ವಾರ್ಷಿಕ ಚಟುವಟಿಕೆಗಳ ಕ್ಯಾಲೆಂಡರ್ ತಯಾರಿಸಿ ಪ್ರತಿಯೊಂದು ಚಟುವಟಿಕೆಯ ವರದಿಯನ್ನು ಜಿಯೋ ಟ್ಯಾಗ್ ಮಾಡಿದ ಫೋಟೋಗಳೊಂದಿಗೆ ಬಿಜೆವೈಎಸ್ ಸಾಫ್ಟ್ವೇರ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಘದ ಕಾರ್ಯಚಟುವಟಿಕೆ ಬಗ್ಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯ ಉಪನಿರ್ದೇಶಕ ವಿಶ್ವನಾಥ್, ಯುವ ಸಬಲೀಕರಣ ಮತ್ತು  ಕ್ರೀಡಾ ಇಲಾಖೆಯ ವಿಠ್ಠಲ ಜಾಬಗೌಡರ್, ಕೊಪ್ಪಳ ತಹಶೀಲ್ದಾರ ಬಸವರಾಜ ತೆನ್ನಳ್ಳಿ, ಡಿಡಿಪಿಐ ಸೋಮಶೇಖರ ಗೌಡ, ಡಿಡಿಪಿಯು ಜಗದೀಶ್ ಜಿ.ಎಚ್., ಮಹಿಳಾ ಮತ್ತು ಮಕ್ಕಳು ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಮರೇಶ್ ಹಾವಿನ, ಸೇರಿದಂತೆ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.
Total Views: 0
Share This Article