ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ರಾಜಕೀಯ ಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆ ಮುಖ್ಯ: ಡಾ.ಸುರೇಶ ಬಿ.ಇಟ್ನಾಳ

H.Mallikarjun
H.Mallikarjun - Kalyanasiri
3 Min Read

Active participation of political parties is crucial in the revision of the voter list: Dr. Suresh B. Itnal

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ರಾಜಕೀಯ ಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆ ಮುಖ್ಯ: ಡಾ.ಸುರೇಶ ಬಿ.ಇಟ್ನಾಳ

ಕೊಪ್ಪಳ ಆಗಸ್ಟ್ 04, (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯಕ್ರಮವನ್ನು ಪಾರದರ್ಶಕ, ನಿಖರ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಅನುಷ್ಠಾನಗೊಳಿಸಬೇಕಿದ್ದು, ಈ ಕಾರ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಕ್ರಿಯವಾಗಿ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ ಅವರು ತಿಳಿಸಿದರು.
ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬAಧಿಸಿದAತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಯ ನಿಖರತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡುವ ಉದ್ದೇಶದಿಂದ ಚುನಾವಣಾ ಆಯೋಗವು ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಜಿಲ್ಲೆಯಾದ್ಯಂತ ವಿವಿಧ ಹಂತಗಳ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳ ಸಲಹೆ, ಸಹಕಾರ ಮತ್ತು ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ, ಮತಗಟ್ಟೆಗಳ ಮರುಹೊಂದಾಣಿಕೆ, ಕರಡು ಮತದಾರರ ಪಟ್ಟಿಯ ಪ್ರಕಟಣೆ, ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕಾರ, ಅವುಗಳ ಪರಿಶೀಲನೆ ಹಾಗೂ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಸೇರಿದಂತೆ ಎಲ್ಲ ಕಾರ್ಯಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಸೇರ್ಪಡೆಯಾಗುವಂತೆಯೂ, ಅನರ್ಹ ಹೆಸರುಗಳು ತೆಗೆದುಹಾಕುವಂತೆಯೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದAತೆ  Absent, Shifted, Death, Duplicate     ಹಾಗೂ  Other     ವಿಭಾಗಗಳಲ್ಲಿ ಗುರುತಿಸಲಾದ ಒಟ್ಟು 1,49,663 ಮತದಾರರ ವಿವರಗಳನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಒದಗಿಸಲಾಗಿದೆ. ಈ ವಿವರಗಳನ್ನು ಪರಿಶೀಲಿಸಿ ಯಾವುದೇ ಆಕ್ಷೇಪಣೆಗಳು ಅಥವಾ ತಿದ್ದುಪಡಿಗಳಿದ್ದಲ್ಲಿ ಚುನಾವಣಾ ಆಯೋಗ ನಿಗದಿಪಡಿಸಿರುವ ಅವಧಿಯೊಳಗೆ ಸಂಬAಧಿಸಿದ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು. ಇದರಿಂದ ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಮತ್ತಷ್ಟು ಹೆಚ್ಚಲಿದೆ ಎಂದು ಅವರು ತಿಳಿಸಿದರು.
ಮತಗಟ್ಟೆಗಳ ಮರುಹೊಂದಾಣಿಕೆ  (Rationalization of Polling Stations)     ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. 1,200 ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿರುವ ಮತಗಟ್ಟೆಗಳನ್ನು ವಿಭಜಿಸಿ ಮತದಾರರಿಗೆ ಸುಗಮ ಮತದಾನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿನ ಮತಗಟ್ಟೆಗಳ ಸಂಖ್ಯೆಯನ್ನು 1,315 ರಿಂದ 1,352 ಕ್ಕೆ ಹೆಚ್ಚಿಸಲು ಪ್ರಸ್ತಾವನೆ ರೂಪಿಸಲಾಗಿದೆ. ಇದರಿಂದ ಮತದಾನ ಪ್ರಕ್ರಿಯೆ ಮತ್ತಷ್ಟು ಸುಗಮ ಹಾಗೂ ಪರಿಣಾಮಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಶ್ರಮ ಹೆಚ್ಚಿದೆ. ತಮಗೆ ಸಂಬAಧಿಸಿದ ಮತಗಟ್ಟೆ ವ್ಯಾಪ್ತಿಯಲ್ಲಿ ಪ್ರತಿ ಮನೆಗೆ ತೆರಳಿ ಗಣತಿ ನಮೂನೆ ನೀಡಿ, ಮರಳಿ ಸಂಗ್ರಹಿಸುವುದು ಸುಲಭ ಕೆಲಸವಲ್ಲ. ಅದನ್ನು ಜಿಲ್ಲೆಯ ಎಲ್ಲ ಬಿಎಲ್‌ಒ ಗಳು ಬಹಳ ಅಚ್ಚುಕಟ್ಟಾಗಿ ನಿಭಾಯಿಸಿರುವುದು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಲು ಪ್ರಮುಖ ಕಾರಣವಾಗಿದೆ ಎಂದು ಇದೇ ಸಂದರ್ಭ ಜಿಲ್ಲಾಧಿಕಾರಿಗಳು ಬಿಎಲ್‌ಒ ಗಳ ಕಾರ್ಯನ್ನು ಶ್ಲಾಘಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ವಿವರಗಳನ್ನು ಹಸ್ತಾಂತರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ತಮಗೆ ನೀಡಿರುವ ಪಟ್ಟಿಯಲ್ಲಿ ವಲಸೆ ಹೋದ, ಕಣ್ತಪ್ಪಿನಿಂದ ಬಿಟ್ಟು ಹೋದ ಮತದಾರರ ಮಾಹಿತಿ ಇದ್ದಲ್ಲಿ ಈ ಕುರಿತು ಬಿಎಲ್‌ಎ ಗಳು ಆಕ್ಷೇಪಣೆ ಸಲ್ಲಿಸಬಹುದು. ಹಾಗೆಯೇ ವಲಸೆ ಹೋದ ಅಥವಾ ಈ ಬಗ್ಗೆ ಮಾಹಿತಿ ಇಲ್ಲದ ಮತದಾರರಿದ್ದಲ್ಲಿ ಅವರಿಗೆ ಗಣತಿ ನಮೂನೆಯನ್ನು ಭರ್ತಿ ಮಾಡಲು ತಿಳಿಸಿ, ಆನ್‌ಲೈನ್ ನಲ್ಲಿಯೂ ನಮೂನೆ ಭರ್ತಿಗೆ ಅವಕಾಶವಿದ್ದು, ಆನ್‌ಲೈನ್ ನಲ್ಲಿಯೂ ಭರ್ತಿ ಮಾಡಲು ತಿಳಿಸಿ. ಪರಿಷ್ಕರಣೆ ಕಾರ್ಯದ ವೇಳಾಪಟ್ಟಿಯ ನಂತರವೂ ಮತದಾರರ ನೋಂದಣಿಗೆ ಅವಕಾಶವಿದ್ದು, ನಮೂನೆ-6 ಅನ್ನು ಭರ್ತಿ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಎಲ್ಲ ಸಲಹೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಚುನಾವಣಾ ತಹಶೀಲ್ದಾರ ರವಿ ವಸ್ತçದ, ಚುನಾವಣಾ ಶಾಖೆಯ ನಾಗರಾಜ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಎನ್. ಇಟ್ಟಂಗಿ, ಬಿಜೆಪಿ ಪ್ರತಿನಿಧಿ ರಾಜು ಬಾಕಳೆ, ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಎಸ್.ಮೈಲಾರಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.
Total Views: 0
Share This Article