ಜಿಲ್ಲಾ ಬೋಧಕ ಆಸ್ಪತ್ರೆ, ಕಿಮ್ಸ್ ನೂತನ ಕಟ್ಟಡಕ್ಕೆ ಸ್ಥಳಾಂತರ

H.Mallikarjun
H.Mallikarjun - Kalyanasiri
1 Min Read

District Teaching Hospital, KIMS shifted to a new building

ಜಿಲ್ಲಾ ಬೋಧಕ ಆಸ್ಪತ್ರೆ, ಕಿಮ್ಸ್ ನೂತನ ಕಟ್ಟಡಕ್ಕೆ ಸ್ಥಳಾಂತರ


ಕೊಪ್ಪಳ ಆಗಸ್ಟ್ 04, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಬೋಧಕ ಆಸ್ಪತ್ರೆ, ಕಿಮ್ಸ್ ಅನ್ನು ಆಗಸ್ಟ್ 3 ರಿಂದ ಗಂಗಾವತಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ 450 ಹಾಸಿಗೆಯ ಕಿಮ್ಸ್ ಬೋಧಕ ಆಸ್ಪತ್ರೆ, ಕೊಪ್ಪಳಕ್ಕೆ ಸ್ಥಳಾಂತರಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕಿಮ್ಸ್ ಕೊಪ್ಪಳವು ಎಂದಿನAತೆ ಜಿಲ್ಲಾ ಬೋಧಕ ಆಸ್ಪತ್ರೆ ಆವರಣದ ಹಿಂಭಾಗದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕರು ಹಾಗೂ ನಿರ್ದೇಶಕರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 1
Share This Article