Independence Day: 50% discount on Kannada Book Authority books
ಸ್ವಾತಂತ್ರ‍್ಯೋತ್ಸವ: ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಶೇ.50 ರಿಯಾಯಿತಿ
ಕೊಪ್ಪಳ ಆಗಸ್ಟ್ 04 (ಕರ್ನಾಟಕ ವಾರ್ತೆ): ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2026ರ ಆಗಸ್ಟ್ ತಿಂಗಳ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಿತ ಎಲ್ಲಾ ಪುಸ್ತಕಗಳನ್ನು ಶೇ.50ರ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ.
ಪುಸ್ತಕ ಪ್ರಿಯರು ಈ ವಿಶೇಷ ಅವಕಾಶವನ್ನು ಬಳಸಿಕೊಳ್ಳುವಂತೆ ಕನ್ನಡ ಪುಸ್ತಕ ಪ್ರಾಧಿಕಾರ ಮನವಿ ಮಾಡಿದೆ. ರಿಯಾಯಿತಿ ಸೌಲಭ್ಯವು ಬೆಂಗಳೂರಿನ ಕನ್ನಡ ಭವನದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆ, ರಾಜ್ಯದ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಆರಂಭಿಸಿರುವ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿರಲಿದೆ. ಇದೇ ರಿಯಾಯಿತಿ ಸೌಲಭ್ಯವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://kpp. karnataka.gov.in ಮೂಲಕ ಆನ್‌ಲೈನ್ ಪುಸ್ತಕ ಖರೀದಿ ವಿಭಾಗದಲ್ಲಿಯೂ ಪಡೆಯಬಹುದಾಗಿದೆ.
ಪುಸ್ತಕ ಪ್ರಿಯರು ಈ ವಿಶೇಷ ಅವಕಾಶವನ್ನು ಬಳಸಿಕೊಳ್ಳುವಂತೆ ಕನ್ನಡ ಪುಸ್ತಕ ಪ್ರಾಧಿಕಾರ ಮನವಿ ಮಾಡಿದೆ. ರಿಯಾಯಿತಿ ಸೌಲಭ್ಯವು ಬೆಂಗಳೂರಿನ ಕನ್ನಡ ಭವನದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆ, ರಾಜ್ಯದ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಆರಂಭಿಸಿರುವ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿರಲಿದೆ. ಇದೇ ರಿಯಾಯಿತಿ ಸೌಲಭ್ಯವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://kpp.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 769 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದಿಂದ ಈ ವಿಶೇಷ ರಿಯಾಯಿತಿ ನೀಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
