ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಕಿಯೋಸ್ಕ್ ವಾಹನಗಳಿಗಾಗಿ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read

Prime Minister Fish Wealth Scheme: Applications Invited for Kiosk Vehicles

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಕಿಯೋಸ್ಕ್ ವಾಹನಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಆಗಸ್ಟ್ 04 (ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಅಡಿಯಲ್ಲಿ ಮತ್ಸ್ಯ ವಾಹಿನಿ ಯೋಜನೆ ಮೂಲಕ ಕಿಯೋಸ್ಕ್ ವಾಹನಗಳನ್ನು ಪಡೆಯಲು ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲೂಕುಗಳ ಮೀನುಗಾರರ ಸಹಕಾರ ಸಂಘಗಳ ಸದಸ್ಯರು, ವೃತ್ತಿಪರ ಮೀನುಗಾರರು ಹಾಗೂ ಆಸಕ್ತ ಮೀನುಕೃಷಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಆಸಕ್ತ ಮೀನುಗಾರರು/ ಮೀನುಕೃಷಿಕರು ಆಗಸ್ಟ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಿಗದಿಪಡಿಸಿರುವ ಗುರಿಗಳಿಗೆ ಅನುಗುಣವಾಗಿ ಮತ್ತು ಸರ್ಕಾರದ ಷರತ್ತು ಹಾಗೂ ನಿಯಮಗಳ ಅನುಸಾರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಮೀನುಗಾರಿಕೆ ಇಲಾಖೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಆಸಕ್ತ ಮೀನುಗಾರರು ಮತ್ತು ಮೀನುಕೃಷಿಕರು ಕೊಪ್ಪಳದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
Share This Article