ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಕಾರ್ಯಕ್ರಮ

H.Mallikarjun
H.Mallikarjun - Kalyanasiri
3 Min Read
oplus_0

Awareness program to prevent child marriage and violence against children

ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಕಾರ್ಯಕ್ರಮ

 

oplus_0

 

ಬಾಲ್ಯ ವಿವಾಹ ನಿಷೇಧ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾ. ಮಹಾಂತೇಶ್ ಎಸ್. ದರಗದ್

ಜಾಹೀರಾತು

ಕೊಪ್ಪಳ ಆಗಸ್ಟ್ 05, (ಕರ್ನಾಟಕ ವಾರ್ತೆ): ಮಕ್ಕಳ ಮೇಲಿನ ದೌರ್ಜನ್ಯ ತಡೆ, ಕಾನೂನು ನೆರವು ಪಡೆಯುವ ವಿಧಾನಗಳನ್ನು ಅರಿತುಕೊಳ್ಳುವುದರ ಜೊತೆಗೆ, ವಿದ್ಯಾರ್ಥಿಗಳು ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಬೇಕು. ಬಾಲ್ಯ ವಿವಾಹ ನಿಷೇಧ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ನಾವೆಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ  ಮಹಾಂತೇಶ್ ಎಸ್. ದರಗದ್ ಕರೆ ನೀಡಿದರು.
ಬುಧವಾರದಂದು ಬಳ್ಳಾರಿ ರೀಡ್ಸ್ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬಾಲ್ಯವಿವಾಹ ನಿಷೇಧ, ಪೋಕ್ಸೋ, ಸೈಬರ್ ಕ್ರೆöÊಂ, ಮಾದಕ ದ್ರವ್ಯ ಮುಕ್ತ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾಮಟ್ಟದಲ್ಲಿ ಹಮ್ಮಿಕೊಂಡಿದ್ದ ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ-2026 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭವಿಷ್ಯದ ಜವಾಬ್ದಾರಿಯುತ ಪ್ರಜೆಗಳಾದ ನೀವುಗಳು ಸಮಾಜದ ಅನಿಷ್ಠ ಪದ್ಧತಿಗಳ ಬಗ್ಗೆ, ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿತುಕೊಳ್ಳಬೇಕು. ಅವುಗಳಿಂದ ದೂರ ಇರುವುದರ ಜೊತೆಗೆ ನಿಮ್ಮ ಸುತ್ತಲಿನ ಪರಿಸರದಲ್ಲೂ ಕೂಡ ಯಾರೂ ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು. ಮೊಬೈಲ್ ಎನ್ನುವ ಮಾಯಾಜಾಲವನ್ನು ನಿಮ್ಮ ವಿದ್ಯಾಭ್ಯಾಸ, ಶೈಕ್ಷಣಿಕ ಉಪಯೋಗಕ್ಕಾಗಿ ಮಾತ್ರ ಬಳಸಬೇಕು. ಮೊಬೈಲ್ ಗೆ ಅಂಟಿಕೊಳ್ಳಬಾರದು. ಸೈಬರ್ ಕ್ರೆöÊಂ ಇಂದು ನಿಮ್ಮಂತಹ ಯುವ ಜನರನ್ನೇ ಗುರಿಯಾಗಿಸಿಕೊಂಡು ವಿವಿಧ ಆಮಿಷಗಳ ಮೂಲಕ ನಿಮ್ಮನ್ನು ಬಲಿ ಪಡೆಯುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬಳಕೆ ಮಿತಿಗೊಳಿಸಿ, ಸೈಬರ್ ಕ್ರೆöÊಂ ನಿಂದ ಸುರಕ್ಷಿತವಾಗಿರಿ ಎಂದು ತಿಳಿಸಿದ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ನಾಲ್ಸಾ ಜಾಗೃತಿ ಯೋಜನೆ-2025, ನಾಲ್ಸಾ ಯೋಜನೆ-2015 ಮತ್ತು ಸಂಕಷ್ಟದ ಸಮಯದಲ್ಲಿ ನೆರವಿಗೆ ಬರುವ `1098′ (ಚೈಲ್ಡ್ಲೈನ್) ಹಾಗೂ `112′ (ತುರ್ತು ಸೇವೆ) ಸಹಾಯವಾಣಿಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು.
ಕೊಪ್ಪಳ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಹೇಮಂತ್ ಕುಮಾರ್ ಅವರು ಮಾತನಾಡಿ, ಸೈಬರ್ ಅಪರಾಧಗಳಿಂದ ಸುರಕ್ಷಿತವಾಗಿರುವುದು ಹಾಗೂ ಪೋಕ್ಸೋ ಕಾಯ್ದೆಯಡಿ ಲಭ್ಯವಿರುವ ಕಾನೂನು ರಕ್ಷಣೆಗಳ ಕುರಿತು ಜಾಗೃತಿ ಮೂಡಿಸಿದರು.
ಇದೇ ವೇಳೆ ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಸಿ.ತಿಪ್ಪೇಶಪ್ಪ ಹಾಗೂ ಜಿಲ್ಲಾ ಯುನಿಸೆಫ್ ಘಟಕದ ಹರೀಶ ಜೋಗಿ ಅವರು ಬಾಲ್ಯ ವಿವಾಹ ನಿಷೇಧ, ಪೋಕ್ಸೋ, ಸೈಬರ್ ಕ್ರೆöÊಂ, ಮಾದಕ ವ್ಯಸನ ಮುಕ್ತ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಹದಿಹರೆಯದ ಹೆಣ್ಣುಮಕ್ಕಳಿಗೆ ಕಾನೂನು ರಕ್ಷಣೆಗಳ ಕುರಿತು ತಿಳಿಸಿದರು.
ಬೃಹತ್ ಜಾಗೃತಿ ಜಾಥಾ:
ಸಮಾವೇಶಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಎಸ್.ಪಿ. ಕಚೇರಿ ಆವರಣದಲ್ಲಿ ಜಿಲ್ಲಾಮಟ್ಟದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಎಸ್.ಪಿ. ಕಚೇರಿಯಿಂದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನವರೆಗೆ ನಡೆದ ಈ ಜಾಥಾದಲ್ಲಿ ವಿದ್ಯಾರ್ಥಿನಿಯರು ಹಾಗೂ ರೀಡ್ಸ್ ಸಂಸ್ಥೆಯ ಸಿಬ್ಬಂದಿ ಬಾಲ್ಯವಿವಾಹ ನಿಷೇಧ, ಪೋಕ್ಸೋ, ಸೈಬರ್ ಅಪರಾಧ ಹಾಗೂ ಮಾದಕ ದ್ರವ್ಯ ತಡೆಯ ಕುರಿತಾದ ಜಾಗೃತಿ ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಪ್ರಕಾಶ್ ಶಿವಪ್ಪ ಕಡಗದ, ಸೈಬರ್ ಕ್ರೆöÊಂ ವಿಭಾಗದ ಡಿ.ವೈ.ಎಸ್.ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್, ಡಿ.ಎಸ್. ಆಂಜನೇಯ, ರೀಡ್ಸ್ ಸಂಸ್ಥೆಯ ಯೋಜನಾ ವ್ಯವಸ್ಥಾಪಕ ಮಲ್ಲೇಶ ಜಾಧವ್ ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
Total Views: 0
Share This Article