ಆ.13ರ ಕರ್ನಾಟಕ ಬಂದ್‌ಗೆ ಕನ್ನಡ ಯುವ ಜಾಗೃತಿ ವೇದಿಕೆ ಸಂಪೂರ್ಣ ಬೆಂಬಲ

H.Mallikarjun
H.Mallikarjun - Kalyanasiri
1 Min Read

Kannada Yuva Jagruthi Vedike extends full support to the Karnataka Bandh on August 13.

ಆ.13ರ ಕರ್ನಾಟಕ ಬಂದ್‌ಗೆ ಕನ್ನಡ ಯುವ ಜಾಗೃತಿ ವೇದಿಕೆ ಸಂಪೂರ್ಣ ಬೆಂಬಲ

ಜಾಹೀರಾತು

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಹೋರಾಟಕ್ಕೆ ಕರೆ

ಗಂಗಾವತಿ: ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗಸ್ಟ್ 13ರಂದು ಕರೆ ನೀಡಿರುವ ಹಿನ್ನಲೆಯಲ್ಲಿ ಕರ್ನಾಟಕ ಬಂದ್‌ಗೆ ಕನ್ನಡ ಯುವ ಜಾಗೃತಿ ವೇದಿಕೆ ಸಂಪೂರ್ಣ ಬೆಂಬಲ ಸೂಚಿಸಿದೆ.

ಈ ಕುರಿತು ಸೋಮವಾರ ಗಂಗಾವತಿ ನಗರದ ಕನ್ನಡ ಯುವ ಜಾಗೃತಿ ವೇದಿಕೆಯ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಎಂ.ಡಿ. ಅಲಿ ಮಾತನಾಡಿ, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಲು ಆಗಸ್ಟ್ 13ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ಸಂಘಟನೆಯ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.

ಬಂದ್‌ ದಿನ ಗಂಗಾವತಿ ನಗರದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟವನ್ನು ಯಶಸ್ವಿಗೊಳಿಸುವಂತೆ ಕನ್ನಡಪರ ಸಂಘಟನೆಗಳ ಮುಖಂಡರು ಮನವಿ ಮಾಡಿದರು.

ಜನಹಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಕೋಟಿ, ಡಾ. ರಾಜಕುಮಾರ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ, ಕನ್ನಡ ಒಕ್ಕೂಟ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಪೀರ್ ಮೊಹಮ್ಮದ್, ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಅಸ್ಲಾಂ ಪಾಷಾ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಯುವ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಎಂ.ಡಿ. ಅಲಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಧಾ ಉಮೇಶ್, ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ದಳಪತಿ, ರಾಜ್ಯ ಸದಸ್ಯ ಎಸ್.ಕೆ. ಭಾಷಾ, ಜಿಲ್ಲಾ ಗೌರವಾಧ್ಯಕ್ಷ ಎಂ.ಡಿ. ಸಾಧಿಕ್, ರಾಜ್ಯ ಸದಸ್ಯ ವಿರೂಪಾಕ್ಷಪ್ಪ ಹಿರೇಮಠ್ ದಾಸನಾಳ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Total Views: 0
Share This Article