KNDC: Interest waiver facility for beneficiaries who have fully repaid the loan
Contents
ಕೆಎಂಡಿಸಿ: ಸಾಲದ ಅಸಲು ಸಂಪೂರ್ಣ ಪಾವತಿಸಿದ ಫಲಾನುಭವಿಗಳಿಗೆ ಬಡ್ಡಿ ಮನ್ನಾ ಸೌಲಭ್ಯ
ಒಂದಾವರ್ತಿ ತೀರುವಳಿ ಯೋಜನೆಯ ಅವಧಿ ಆ. 31ರವರೆಗೆ ವಿಸ್ತರಣೆ
ಕೊಪ್ಪಳ ಆಗಸ್ಟ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ವಿವಿಧ ಯೋಜನೆಗಳಡಿ 2013-14ರಿಂದ 2018-19ನೇ ಸಾಲಿನವರೆಗೆ ಸಾಲ ಪಡೆದಿರುವ ಫಲಾನುಭವಿಗಳಿಗೆ ಸುವರ್ಣಾವಕಾಶ ಕಲ್ಪಿಸಲಾಗಿದೆ.
ಸಾಲದ ಅಸಲು ಮೊತ್ತವನ್ನು ಸಂಪೂರ್ಣವಾಗಿ ಪಾವತಿಸುವ ಫಲಾನುಭವಿಗಳಿಗೆ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ “ಒಂದಾವರ್ತಿ ತೀರುವಳಿ ಯೋಜನೆ (ಒನ್ ಟೈಮ್ ಸೆಟ್ಟಲ್‌ಮೆಂಟ್ ಸ್ಕೀಮ್-ಒಟಿಎಸ್)” ಯ ಅವಧಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ವಿಸ್ತರಿಸಲಾಗಿದ್ದು, ಸಾಲದ ಖಾತೆಗಳನ್ನು ಮುಕ್ತಾಯಗೊಳಿಸಲು ಆಗಸ್ಟ್ 31 ರವರೆಗೆ ಅವಕಾಶ ನೀಡಲಾಗಿದೆ.
ಸಂಬಂಧಪಟ್ಟ ಫಲಾನುಭವಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಸಾಲದ ಖಾತೆಗಳನ್ನು ಮುಕ್ತಾಯಗೊಳಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, 1ನೇ ಮಹಡಿ, ಹೊಸಪೇಟೆ ರಸ್ತೆ, ಕೊಪ್ಪಳ ಜಿಲ್ಲಾ ಕಚೇರಿಯನ್ನು ಅಥವಾ ದೂರವಾಣಿ: 08539-225008ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Total Views:
0