Contents
Tungabhadra Project: Decision to release water into canals for the monsoon rush
ತುಂಗಭದ್ರಾ ಯೋಜನೆ: ಮುಂಗಾರು ಹಂಗಾಮಿಗೆ ಕಾಲುವೆಗಳಿಗೆ ನೀರು ಬಿಡುಗಡೆ ನಿರ್ಧಾರ
ಕೊಪ್ಪಳ ಆಗಸ್ಟ್ 12 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯ ಪ್ರದೇಶದಲ್ಲಿ ಮಳೆ ಅಭಾವ ಹಾಗೂ ‘ಎಲ್ ನಿನೊ’ ಪರಿಣಾಮದಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಿ, 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳು ಮತ್ತು ಬೇಸಿಗೆಯ ಕುಡಿಯುವ ನೀರಿನ ಅಗತ್ಯಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು 126ನೇ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ನಿರ್ಧರಿಸಲಾಗಿದೆ.
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರು ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಸಮ್ಮುಖದಲ್ಲಿ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ನಡೆಸಿದ ವಿಸ್ತೃತ ಚರ್ಚೆಯ ನಂತರ ವೇಳಾಪಟ್ಟಿ ನಿಗದಿಪಡಿಸಲಾಗಿದೆ.
*ಕಾಲುವೆವಾರು ನೀರು ಪೂರೈಕೆ ವೇಳಾಪಟ್ಟಿ:* ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಆಗಸ್ಟ್ 11 ರಿಂದ ನವೆಂಬರ್ 10ರವರೆಗೆ 4,100 ಕ್ಯೂಸೆಕ್ಸ್. ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಆ. 11 ರಿಂದ ನ. 10ರವರೆಗೆ 1,200 ಕ್ಯೂಸೆಕ್ಸ್. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಆ. 11 ರಿಂದ ನ. 10 ರವರೆಗೆ 650 ಕ್ಯೂಸೆಕ್ಸ್. ರಾಯ ಬಸವಣ್ಣ ಕಾಲುವೆಗೆ 01.01.2026 ರಿಂದ 10.12.2026 ರವರೆಗೆ 180 ಕ್ಯೂಸೆಕ್ಸ್. ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಆ. 11 ರಿಂದ ನ. 10 ರವರೆಗೆ ಜಲಾಶಯದ ಮಟ್ಟ 1585 ಅಡಿ ತಲುಪುವವರೆಗೆ 25 ಕ್ಯೂಸೆಕ್ಸ್. ನದಿ ಪೂರಕ ಕೆರೆಗಳಿಗೆ ಆ. 11 ರಿಂದ ಆ. 17ರವರೆಗೆ 500 ಕ್ಯೂಸೆಕ್ಸ್ ನೀರು ಬಿಡುಗಡೆ ನಿರ್ಧಾರಿಸಲಾಗಿದ್ದು, ನೀರು ಲಭ್ಯತೆ ಅಥವಾ 90 ದಿನಗಳ ಕಾಲಾವಧಿ, ಇವೆರಡರಲ್ಲಿ ಯಾವುದು ಮೊದಲೋ ಅದು ಅನ್ವಯಿಸುತ್ತದೆ.
*ರೈತರಿಗೆ ಮಿತ ಬೆಳೆ ಬೆಳೆಯಲು ಮನವಿ:* ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಜಲಾಶಯದಲ್ಲಿ ಲಭ್ಯವಾಗಬಹುದಾದ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಹಾಗೂ ‘ಎಲ್ ನಿನೊ’ ಪರಿಣಾಮದಿಂದ ಉಂಟಾಗಲಿರುವ ಬರ ಪರಿಸ್ಥಿತಿ ಅವಲೋಕಿಸಿ ಮಳೆಯ ಅಭಾವದಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ಪ್ರಸ್ತುತ ಲಭ್ಯವಿರುವ ನೀರಿನಲ್ಲಿ ಮುಂಗಾರು ಹಂಗಾಮಿನ ಬೆಳೆಗಳಿಗೆ ಹಾಗೂ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿಗಾಗಿ ಕೆರೆಕಟ್ಟೆ ತುಂಬಿಸುವುದು ಮತ್ತು ಇತರೆ ಉಪಯೋಗಕ್ಕಾಗಿ ನೀರನ್ನು ಕಾಯ್ದಿರಿಸುವುದು ಅವಶ್ಯವಾಗಿದ್ದು, ಆದ್ದರಿಂದ ರೈತ ಭಾಂದವರು ಮಿತ ಬೆಳೆಗಳನ್ನು ಮಾತ್ರ ಬೆಳೆದು ಇಲಾಖೆಯೊಡನೆ ಸಹಕಾರಿಸಲು ಕೋರಲಾಗಿದೆ. ಪ್ರಸ್ತುತ ಜಲಾಶಯದ ಒಳಹರಿವಿನ ಲಭ್ಯತೆ ಅನುಸಾರ ಹಾಗೂ ಮುಂಬರುವ ಒಳಹರಿವು ವ್ಯತಿರಿಕ್ತವಾದಲ್ಲಿ (ಕಡಿಮೆ/ಹೆಚ್ಚು) ದಿನಾಂಕ:10.09.2026 ರಂದು ನೀರಾವರಿ ಸಲಹಾ ಸಮಿತಿಯನ್ನು ಆಯೋಜಿಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಸ್.ಬಿ ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views:
0