ಜಾಹೀರಾತು

80th Independence Day celebration at the district center on August 15
ಆಗಸ್ಟ್ 15ರಂದು ಜಿಲ್ಲಾ ಕೇಂದ್ರದಲ್ಲಿ 80ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆ
ಕೊಪ್ಪಳ ಆಗಸ್ಟ್ 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 80ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸೇನ್ ಸಾಬ್ ನಬೀಸಾಬ್ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ ಅವರು ಆಗಮಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ ಅವರು ಉಪಸ್ಥಿತರಿರುವರು.
ಸ್ವಾತಂತ್ರ‍್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣದ ನಂತರ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಎನ್.ಸಿ.ಸಿ., ಎನ್.ಎಸ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್ ಮುಂತಾದವರ ತಂಡದಿಂದ ಪಥಸಂಚಲನ, ಸಾಧಕರಿಗೆ ಸನ್ಮಾನ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕೊಪ್ಪಳ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
Total Views:
0
ಜಾಹೀರಾತು

ಜಾಹೀರಾತು

